HEALTH TIPS

ಟಾಟಾದ ತಾಕತ್ತು.. ದೇಶದಲ್ಲಿ ಅತಿ ಹೆಚ್ಚು ಮಾರಾಟವಾಗುತ್ತಿರುವ ಕಾರಿದು, ರೂ.6 ಲಕ್ಷ ಬೆಲೆ.. 26 ಕಿ.ಮೀ ಮೈಲೇಜ್

Top Post Ad

Click to join Samarasasudhi Official Whatsapp Group

Qries

 ಭಾರತದಲ್ಲಿ ಟಾಟಾ ಮೋಟಾರ್ಸ್ (Tata Motors) ಸುರಕ್ಷಿತ ವಾಹನ ತಯಾರಿಕೆಗೆ ಹೆಸರುವಾಸಿಯಾಗಿದೆ. ಕಳೆದ ತಿಂಗಳು (ಜೂನ್ 2024) ದೇಶೀಯ ಮಾರುಕಟ್ಟೆಯಲ್ಲಿ ಕಂಪನಿಯ ಜನಪ್ರಿಯ ಮೈಕ್ರೋ ಎಸ್‌ಯುವಿ 'ಪಂಚ್' ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟಗೊಂಡ ಕಾರಾಗಿ ಹೊರಹೊಮ್ಮಿದೆ.

ಈ ವರ್ಷದ ಮೊದಲಾರ್ಧ ಮೂರು ತಿಂಗಳಲ್ಲಿಯೂ ಈ ಕಾರನ್ನು ಭಾರೀ ಪ್ರಮಾಣದಲ್ಲಿ ಮಾರಾಟ ಮಾಡಲಾಗಿದೆ. ಜೂನ್‌ನಲ್ಲಿ 18,238 ಯುನಿಟ್, ಮಾರ್ಚ್‌ನಲ್ಲಿ 17,547 ಹಾಗೂ ಏಪ್ರಿಲ್‌ನಲ್ಲಿ 19,158 ಯುನಿಟ್ ಪಂಚ್ ಎಸ್‌ಯುವಿಗಳನ್ನು ಮಾರಲಾಗಿದೆ.


ದೇಶೀಯವಾಗಿ ಟಾಟಾ ಪಂಚ್ ಮೈಕ್ರೋ-ಎಸ್‌ಯುವಿ (Tata Punch Micro-Suv) ಇಂಧನ ಹಾಗೂ ವಿದ್ಯುತ್ ಚಾಲಿತ ಆಯ್ಕೆಯಲ್ಲಿ ಖರೀದಿಗೆ ಸಿಗುತ್ತದೆ. ಇಂಧನ ಚಾಲಿತ ಪಂಚ್ ಕಾರು ರೂ.6.13 ಲಕ್ಷದಿಂದ ರೂ.10.20 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಪ್ಯೂರ್ ಮತ್ತು ಅಡ್ವೆಂಚರ್ ಸೇರಿದಂತೆ ವಿವಿಧ ರೂಪಾಂತರ (ವೇರಿಯೆಂಟ್)ಗಳ ಆಯ್ಕೆಯನ್ನು ಪಡೆದಿದೆ. ಅಟಾಮಿಕ್ ಆರೆಂಜ್, ಟ್ರಾಪಿಕಲ್ ಮಿಸ್ಟ್, ಡೇಟೋನಾ ಗ್ರೇ ಒಳಗೊಂಡಂತೆ ವಿವಿಧ ಬಣ್ಣಗಳೊಂದಿಗೂ ಲಭ್ಯವಿದೆ.

ಈ ಪಂಚ್ ಎಸ್‌ಯುವಿಯು 1.2-ಲೀಟರ್ ಸಾಮರ್ಥ್ಯದ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದ್ದು, ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್ ಅಥವಾ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ. ಪೆಟ್ರೋಲ್ ಚಾಲಿತ ಮಾದರಿಗಳು 18.8 ರಿಂದ 20.09 ಕೆಎಂಪಿಎಲ್, ಸಿಎನ್‌ಜಿ ಚಾಲಿತ ರೂಪಾಂತರಗಳು 26.99 ಕೆಎಂ/ಕೆಜಿ ಮೈಲೇಜ್ ನೀಡುತ್ತವೆ.

ನೂತನ ಟಾಟಾ ಪಂಚ್ ಕಾರಿನಲ್ಲಿ 5 ಮಂದಿ ಆರಾಮದಾಯಕವಾಗಿ ದೂರದ ಊರುಗಳಿಗೆ ಪ್ರಯಾಣಿಸಬಹುದು. ಹೆಚ್ಚಿನ ಲಗೇಜ್ ಸಾಗಿಸಲು ದೊಡ್ಡದಾದ ಬೂಟ್ ಸ್ಪೇಸ್ ಅನ್ನು ಹೊಂದಿದೆ. ಈ ಕಾರು 7-ಇಂಚಿನ ಟಚ್‌ಸ್ಕ್ರೀನ್ ಡಿಸ್ಪ್ಲೇ, ಸೆಮಿ-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಯ ದೃಷ್ಟಿಯಿಂದ ಡುಯಲ್ ಫ್ರಂಟ್ ಏರ್‌ಬ್ಯಾಗ್, TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು ರೇರ್-ವ್ಯೂ ಕ್ಯಾಮೆರಾವನ್ನು ಹೊಂದಿದೆ.

ಟಾಟಾ ಪಂಚ್ ಇವಿ (Tata Punch EV) ಬಗ್ಗೆ ಹೇಳುವುದಾದರೆ, ಇದು ರೂ.10.99 ಲಕ್ಷದಿಂದ ರೂ.15.49 ಲಕ್ಷ (ಎಕ್ಸ್ ಶೋರೂಂ) ದರವನ್ನು ಪಡೆದಿದೆ. ಸ್ಮಾರ್ಟ್, ಸ್ಮಾರ್ಟ್ ಪ್ಲಸ್, ಅಡ್ವೆಂಚರ್, ಎಂಪವರ್ಡ್ ಸೇರಿದಂತೆ ಹಲವು ರೂಪಾಂತರಗಳೊಂದಿಗೆ ದೊರೆಯುತ್ತದೆ. ಸ್ಮಾರ್ಟ್ ಸಿಂಗಲ್ ಟೋನ್, ಫಿಯರ್‌ಲೆಸ್ ರೆಡ್ ಡುಯಲ್ ಟೋನ್, ಡೇಟೋನಾ ಗ್ರೇ ಡುಯಲ್ ಟೋನ್ ಒಳಗೊಂಡಂತೆ 1 ಮೊನೊಟೋನ್ ಹಾಗೂ 5 ಡುಯಲ್ ಟೋನ್ ಬಣ್ಣಗಳನ್ನು ಹೊಂದಿದೆ.

ನೂತನ ಪಂಚ್ ಇವಿ 25 ಮತ್ತು 35 ಕೆಡಬ್ಲ್ಯೂಹೆಚ್ ಬ್ಯಾಟರಿ ಆಯ್ಕೆಯನ್ನು ಪಡೆದಿದ್ದು, ಸಂಪೂರ್ಣ ಚಾರ್ಜ್‌ನಲ್ಲಿ ಕ್ರಮವಾಗಿ 315 ರಿಂದ 421 ಕಿಲೋಮೀಟರ್ ಓಡುತ್ತದೆ. ಇದರ ಬ್ಯಾಟರಿ ಪ್ಯಾಕ್ ಡಿಸಿ ಫಾಸ್ಟ್ ಚಾರ್ಜರ್ ಆಯ್ಕೆಯಲ್ಲಿ ಶೇಕಡ 10-80% ಚಾರ್ಜ್ ಆಗುವುದಕ್ಕೆ 56 ನಿಮಿಷ ತೆಗೆದುಕೊಳ್ಳುತ್ತದೆ. ಈ ಎಲೆಕ್ಟ್ರಿಕ್ ಕಾರಿನಲ್ಲಿ 5 ಜನರು ಓಡಾಟವನ್ನು ನಡೆಸಬಹುದು.

ಟಾಟಾ ಪಂಚ್ ಇವಿ 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ ಪ್ಲೇ, ಫುಲ್-ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಸನ್‌ರೂಫ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌, ESP (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಅನ್ನು ಒಳಗೊಂಡಿದೆ.

Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



Tags

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.
Qries