ಸೂರತ್ :ಗುಜರಾತ್ ನ ಸೂರತ್ ನಗರದಲ್ಲಿ 6 ಅಂತಸ್ತಿನ ವಸತಿ ಕಟ್ಟಡ ಕುಸಿತವಾಗಿದ್ದು, ಅವಶೇಷಗಳಡಿ ಹಲವರು ಸಿಲುಕಿರುವ ಸಾಧ್ಯತೆ ಇದೆ.
ಅವಶೇಷಗಳಡಿ ಸಿಲುಕಿದ ಓರ್ವ ಮಹಿಳೆಯನ್ನು ರಕ್ಷಿಸಲಾಗಿದ್ದು, ಶೋಧ- ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ ಎಂದು ಸೂರತ್ ಜಿಲ್ಲಾ ಅಧಿಕಾರಿ ಸೌರಭ್ ಪರ್ಧಿ ಹೇಳಿದ್ದಾರೆ.
"ಕಟ್ಟಡದಲ್ಲಿ ನಾಲ್ಕರಿಂದ 5 ಫ್ಲಾಟ್ ಗಳಲ್ಲಿ ಜನರಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಓರ್ವ ಮಹಿಳೆಯನ್ನು ರಕ್ಷಿಸಲಾಗಿದೆ. ಇನ್ನೂ ನಾಲ್ಕರಿಂದ 5 ಮಂದಿ ಅವಶೇಷಗಳಡಿ ಸಿಲುಕಿದ್ದಾರೆ ಎಂದು ಶಂಕಿಸಲಾಗಿದೆ. ಎನ್ ಡಿಆರ್ ಎಫ್, ಎಸ್ ಡಿಆರ್ ಎಫ್ ಸಹಾಯದಿಂದ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ, ಮುಂದಿನ ಕೆಲವು ಗಂಟೆಗಳಲ್ಲಿ ರಕ್ಷಣಾ ಕಾರ್ಯಾಚರಣೆ ಮುಕ್ತಾಯಗೊಳ್ಳಬಹುದು" ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ..