HEALTH TIPS

6ನೇ ತರಗತಿಗೆ ಹೊಸ ಪಠ್ಯ ವಿಳಂಬ: ಕೇಂದ್ರದ ವಿರುದ್ಧ ಕಾಂಗ್ರೆಸ್‌ ವಾಗ್ದಾಳಿ

          ವದೆಹಲಿ: ಕೇಂದ್ರ ಪಠ್ಯಕ್ರಮದ 6ನೇ ತರಗತಿಗೆ ಹೊಸ ಪಠ್ಯಪುಸ್ತಕಗಳನ್ನು ಪ್ರಕಟಿಸುವಲ್ಲಿ ಆಗುತ್ತಿರುವ ವಿಳಂಬಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಶುಕ್ರವಾರ ವಾಗ್ದಾಳಿ ಮಾಡಿದೆ.

          ಪರೀಕ್ಷಾ ಪ್ರಕ್ರಿಯೆಗಳನ್ನು ಸಮರ್ಪಕವಾಗಿ ನಿರ್ವಹಿಸದ ಕೇಂದ್ರ ಶಿಕ್ಷಣ ಸಚಿವಾಲಯವು, ಮಕ್ಕಳಿಗೆ ಪಠ್ಯಪುಸ್ತಕಗಳನ್ನು ಒದಗಿಸುವಲ್ಲಿಯೂ ಅಸಮರ್ಥತೆ ಪ್ರದರ್ಶಿಸುತ್ತಿದೆ.

            ಅಲ್ಲದೆ ಈ ಅಸಮರ್ಥತೆಯು ದಿನೇ ದಿನೇ ಹೆಚ್ಚುತ್ತಿದೆ ಎಂದು ಅದು ಆರೋಪಿಸಿದೆ.

'ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್‌ಟಿಎ) ಮೂಲಕ ಪರೀಕ್ಷಾ ಪ್ರಕ್ರಿಯೆಗಳನ್ನು ಹಾಳುಮಾಡಿದ ಬಳಿಕ, ಶಿಕ್ಷಣ ಸಚಿವಾಲಯವು ಮಕ್ಕಳ ಶಿಕ್ಷಣವನ್ನೂ ನಾಶಮಾಡುತ್ತಿದೆ' ಎಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್‌ 'ಎಕ್ಸ್‌'ನಲ್ಲಿ ಹೇಳಿದ್ದಾರೆ.

             'ಶೈಕ್ಷಣಿಕ ವರ್ಷ ಪ್ರಾರಂಭವಾಗಿದ್ದರೂ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಪರಿಷತ್ (ಎನ್‌ಸಿಇಆರ್‌ಟಿ) 6ನೇ ತರಗತಿ ವಿದ್ಯಾರ್ಥಿಗಳಿಗೆ ವಿಜ್ಞಾನ, ಗಣಿತ, ಸಮಾಜ ವಿಜ್ಞಾನಗಳ ವಿಷಯಗಳ ಹೊಸ ಪಠ್ಯಪುಸ್ತಕಗಳನ್ನು ಇಲ್ಲಿಯವರೆಗೂ ಪ್ರಕಟಿಸಿಲ್ಲ. ಪಠ್ಯಗಳು ಮುದ್ರಣವಾಗಲು ಇನ್ನೂ 10ರಿಂದ 15 ದಿನಗಳು ಬೇಕಾಗುತ್ತವೆಯಂತೆ' ಎಂದು ಅವರು ತಿಳಿಸಿದ್ದಾರೆ.

              'ಅಲ್ಲದೆ ಪಠ್ಯಪುಸ್ತಕಗಳನ್ನು ರಾಷ್ಟ್ರೀಯ ಪಠ್ಯಕ್ರಮ ಮತ್ತು ಬೋಧನಾ ಕಲಿಕಾ ಸಾಮಗ್ರಿ ಸಮಿತಿ (ಎನ್‌ಎಸ್‌ಟಿಸಿ) ಅಂತಿಮಗೊಳಿಸಿಲ್ಲ' ಎಂದೂ ಅವರು ಹೇಳಿದ್ದಾರೆ.

                 ಹೊಸ ಪುಸ್ತಕಗಳು ವಿದ್ಯಾರ್ಥಿಗಳಿಗೆ ದೊರೆಯುವುದು ಎರಡು ತಿಂಗಳು ವಿಳಂಬವಾಗಬಹುದು ಎಂದು ಅಧಿಕಾರಿಗಳು ಲೆಕ್ಕಹಾಕಿದ್ದಾರೆ ಎಂದು ಅವರು ತಿಳಿಸಿದ್ದಾರೆ.

             ಪ್ರಧಾನಿ ಅವರ 'ಪರೀಕ್ಷಾ ಪೆ ಚರ್ಚಾ' ಅನ್ನು ವೆಬ್‌ ವೇದಿಕೆಗಾಗಿ ಮರುರೂಪಿಸುವ ಎನ್‌ಸಿಇಆರ್‌ಟಿ ಕ್ರಮವನ್ನು ಟೀಕಿಸಿರುವ ಅವರು, 'ಪ್ರಶ್ನೆ ಪತ್ರಿಕೆ ಸೋರಿಕೆ ರಹಿತ ಪರೀಕ್ಷೆಗಳನ್ನು ಖಚಿತಪಡಿಸಿಕೊಳ್ಳಲಾಗದ, ಶಾಲಾ ಮಕ್ಕಳಿಗೆ ಪಠ್ಯ ಪುಸ್ತಕಗಳನ್ನು ಸಮಯಕ್ಕೆ ಸರಿಯಾಗಿ ಒದಗಿಸಲಾಗದವರು ಇಂತಹ ಕಾರ್ಯಗಳಲ್ಲಿಯೇ ಸಮಯ ವ್ಯಯಮಾಡುತ್ತಿದ್ದಾರೆ' ಎಂದು ದೂರಿದ್ದಾರೆ.

              ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ಅವರು, ಹೊಸ ಪಠ್ಯಕ್ರಮ ಚೌಕಟ್ಟಿಗೆ (ಎನ್‌ಸಿಎಫ್‌) ಅನುಗುಣವಾಗಿ ಶಾಲಾ ಪಠ್ಯಪುಸ್ತಕಗಳನ್ನು ರೂಪಿಸಲಾಗಿದೆಯೇ ಎಂಬುದನ್ನು ಪರಿಶೀಲಿಸಿದ ಮರು ದಿನ ಜೈರಾಮ್‌ ರಮೇಶ್‌ ಅವರ ಪ್ರತಿಕ್ರಿಯೆ ಬಂದಿದೆ. 6ನೇ ತರಗತಿ ಪಠ್ಯಪುಸ್ತಕಗಳು ಮಾರುಕಟ್ಟೆಗೆ ಬರುವಲ್ಲಿ ವಿಳಂಬವಾಗಿರುವ ಹಿನ್ನೆಲೆಯಲ್ಲಿ ಈ ಸಭೆ ನಡೆದಿತ್ತು.

                2024-25ನೇ ಶೈಕ್ಷಣಿಕ ಸಾಲಿನಲ್ಲಿ 3 ಮತ್ತು 6ನೇ ತರಗತಿಗಳಿಗೆ ಹೊಸ ಪಠ್ಯಪುಸ್ತಕಗಳನ್ನು ಪರಿಚಯಿಸಲಾಗುವುದು ಎಂದು ಎನ್‌ಸಿಇಆರ್‌ಟಿ ಘೋಷಿಸಿತ್ತು. ಪಠ್ಯಪುಸ್ತಕಗಳ ಕಾರ್ಯ ಪ್ರಗತಿಯಲ್ಲಿದ್ದು, 3 ಮತ್ತು 6ನೇ ತರಗತಿಗಳಿಗೆ ಸಂಬಂಧಿಸಿದ 9 ಪಠ್ಯಪುಸ್ತಗಳು ಈಗಾಗಲೇ ಲಭ್ಯವಿವೆ. ಉಳಿದ ಎಂಟು ಪಠ್ಯಪುಸ್ತಕಗಳು ಶೀಘ್ರದಲ್ಲಿಯೇ ಲಭ್ಯವಾಗಲಿವೆ ಎಂದು ಶಿಕ್ಷಣ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries