ಮುಂಬೈ: ಪ್ರಶ್ನೆಪತ್ರಿಕೆ ಸೋರಿಕೆ ತಡೆಯುವ ನಿಟ್ಟಿನಲ್ಲಿ ಕಾನೂನು ಜಾರಿಮಾಡಲು ರೂಪಿಸಿರುವ ಮಸೂದೆಯನ್ನು ಈಗ ನಡೆಯುತ್ತಿರುವ ಮುಂಗಾರು ಅಧಿವೇಶನದಲ್ಲೇ ಮಂಡಿಸಲಾಗುವುದು ಎಂದು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರು ಸೋಮವಾರ ಹೇಳಿದರು.

ವಿಧಾನಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಸರ್ಕಾರಿ ಉದ್ಯೋಗಗಳ ನೇಮಕಾತಿ ಕುರಿತು ಪ್ರಶ್ನೆಗಳನ್ನು ಕೇಳಲಾಯಿತು.
ನೀಟ್-ಯುಜಿ ಹಗರಣ ಸೇರಿ ಹಲವು ಪರೀಕ್ಷಾ ಅಕ್ರಮಗಳು ಬೆಳಕಿಗೆ ಬಂದಿರುವ ಹಿನ್ನೆಲೆಯಲ್ಲಿ, ಪ್ರಶ್ನೆಪತ್ರಿಕೆ ಸೋರಿಕೆ ತಡೆಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಕಠಿಣ ಕಾನೂನನ್ನು ಜಾರಿಗೊಳಿಸಬೇಕು ಎಂದು ಕಾಂಗ್ರೆಸ್‌ನ ಮಹಾರಾಷ್ಟ್ರ ಘಟಕದ ಮುಖ್ಯಸ್ಥ ನಾನಾ ಪಟೋಲೆ ಅವರು ಶನಿವಾರ ಆಗ್ರಹಿಸಿದ್ದರು.