ಗುವಾಹಟಿ: ಕೋಚಿಂಗ್ ಸೆಂಟರ್ ಶಿಕ್ಷಕರೊಬ್ಬರನ್ನು ವಿದ್ಯಾರ್ಥಿಯೊಬ್ಬ ತರಗತಿಯಲ್ಲೇ ಚಾಕುವಿನಿಂದ ಚುಚ್ಚಿ ಕೊಂದಿರುವ ಘಟನೆ ಅಸ್ಸಾಂನ ಶಿವಸಾಗರ್ ಜಿಲ್ಲೆಯಲ್ಲಿ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಗುವಾಹಟಿ: ಕೋಚಿಂಗ್ ಸೆಂಟರ್ ಶಿಕ್ಷಕರೊಬ್ಬರನ್ನು ವಿದ್ಯಾರ್ಥಿಯೊಬ್ಬ ತರಗತಿಯಲ್ಲೇ ಚಾಕುವಿನಿಂದ ಚುಚ್ಚಿ ಕೊಂದಿರುವ ಘಟನೆ ಅಸ್ಸಾಂನ ಶಿವಸಾಗರ್ ಜಿಲ್ಲೆಯಲ್ಲಿ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಆರೋಪಿಯನ್ನು ಶಿವಸಾಗರ ನಿವಾಸಿ ಎಂದು ಗುರುತಿಸಲಾಗಿದೆ. ಬಾಲಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಈ ಘಟನೆ ಶನಿವಾರ ನಡೆದಿದೆ. ಆರೋಪಿಯು 11ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ ಎಂದು ತಿಳಿದುಬಂದಿದೆ
ಚಾಕು ಇರಿದಿರುವ ಕುರಿತು ನಮಗೆ ಮಾಹಿತಿ ಬಂದಿತ್ತು. ತಕ್ಷಣವೇ ನಾವು ಸ್ಥಳಕ್ಕೆ ಧಾವಿಸಿ, ರಕ್ತದ ಮಡುವಿನಲ್ಲಿ ಬಿದ್ದಿದ್ದ ಶಿಕ್ಷಕರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಬದುಕುಳಿಯಲಿಲ್ಲ ಎಂದು ಪೊಲೀಸರು ಹೇಳಿದ್ದಾರೆ.
ಪ್ರಾಥಮಿಕ ವರದಿ ಪ್ರಕಾರ, ಯಾವುದೋ ವಿಚಾರಕ್ಕೆ ವಿದ್ಯಾರ್ಥಿಯನ್ನು ಶಿಕ್ಷಕರು ನಿಂದಿಸಿದ್ದರು. ಇದೇ ಕೋಪದಿಂದಾಗಿ ಮರುದಿನ ತರಗತಿಗೆ ಬಂದ ವಿದ್ಯಾರ್ಥಿ ಏಕಾಏಕಿ ಶಿಕ್ಷಕರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಗೆ ನಿಖರವಾದ ಕಾರಣವೆನೆಂದು ತಿಳಿದು ಬಂದಿಲ್ಲ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸುತ್ತಿದ್ದೇವೆ. ಘಟನೆ ನಡೆದ ಸ್ಥಳದಲ್ಲಿಯೇ ಚಾಕು ಸಹ ದೊರತಿದೆ ಎಂದು ಪೊಲೀಸರು ಹೇಳಿದ್ದಾರೆ.