ಜಮ್ಮು: ಭಾರೀ ಮಳೆಯಿಂದಾಗಿ ಮುಂಜಾಗ್ರತಾ ಕ್ರಮವಾಗಿ ಶನಿವಾರ ಗುಹಾ ದೇಗುಲದ ಎರಡೂ ಮಾರ್ಗಗಳಲ್ಲಿ ಅಮರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಿನ್ನೆ ರಾತ್ರಿಯಿಂದ ಬಲ್ತಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಭಾರೀ ಮಳೆಯಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ಯಾತ್ರಾರ್ಥಿಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಮುಂಜಾಗ್ರತಾ ಕ್ರಮವಾಗಿ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಮರನಾಥ ಯಾತ್ರೆಯು ಜೂನ್ 29 ರಿಂದ ಆರಂಭವಾಗಿದ್ದು, 3,800 ಮೀಟರ್ ಎತ್ತರದ ಗುಹಾಂತರ ದೇಗುಲಕ್ಕೆ ಭೇಟಿ ನೀಡಿ ನೈಸರ್ಗಿಕವಾಗಿ ರೂಪುಗೊಂಡ ಹಿಮಲಿಂಗದ ದರ್ಶನ ಪಡೆದ ಭಕ್ತರ ಸಂಖ್ಯೆ 1.50 ಲಕ್ಷ ದಾಟಿದೆ.ಅಮರನಾಥ ಯಾತ್ರೆಯು ಜೂನ್ 29 ರಿಂದ ಆರಂಭವಾಗಿದ್ದು, 3,800 ಮೀಟರ್ ಎತ್ತರದ ಗುಹಾಂತರ ದೇಗುಲಕ್ಕೆ ಭೇಟಿ ನೀಡಿ ನೈಸರ್ಗಿಕವಾಗಿ ರೂಪುಗೊಂಡ ಹಿಮಲಿಂಗದ ದರ್ಶನ ಪಡೆದ ಭಕ್ತರ ಸಂಖ್ಯೆ 1.50 ಲಕ್ಷ ದಾಟಿದೆ.