HEALTH TIPS

ಪ್ರಧಾನಿ ನರೇಂದ್ರ ಮೋದಿ ರಷ್ಯಾ ಪ್ರವಾಸ; ಗರಿಗೆದರಿದ ನಿರೀಕ್ಷೆ

           ವದೆಹಲಿ: ಪ್ರಧಾನಿ ಮೋದಿ ಅವರು ಜುಲೈ 8ರಂದು (ಸೋಮವಾರ) ರಷ್ಯಾದ ಎರಡು ದಿನಗಳ ಪ್ರವಾಸವನ್ನು ಪ್ರಾರಂಭಿಸಲಿದ್ದಾರೆ. ರಷ್ಯಾ ಅಧ್ಯಕ್ಷ ಪುಟಿನ್ ಅವರ ಆಹ್ವಾನದ ಮೇರೆಗೆ ಎರಡು ದಿನಗಳ ರಷ್ಯಾ ಪ್ರವಾಸಕ್ಕೆ ತೆರಳಲಿದ್ದಾರೆ. ಜುಲೈ 8 ಮತ್ತು 9ರಂದು ನಡೆಯಲಿರುವ ಈ ಭೇಟಿಯಲ್ಲಿ ಪ್ರಧಾನಿ ಮೋದಿ ಅವರು 22ನೇ ವಾರ್ಷಿಕ ಭಾರತ-ರಷ್ಯಾ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ.

           ಪ್ರಧಾನಿ ಮೋದಿ ಸೋಮವಾರ ಮಧ್ಯಾಹ್ನ ಮಾಸ್ಕೋ ತಲುಪಲಿದ್ದು, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಆಯೋಜಿಸಿರುವ ಖಾಸಗಿ ಔತಣಕೂಟದಲ್ಲಿ ಪಾಲ್ಗೊಳ್ಳಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಸ್ವಾಗತಕ್ಕೆ ರಷ್ಯಾದ ಕ್ರೆಮ್ಲಿನ್ (ರಷ್ಯಾ ಅಧ್ಯಕ್ಷರ ಕಚೇರಿ) ಸಂಭ್ರಮದಲ್ಲಿದೆ. ವಾಸ್ತವವಾಗಿ ಪಿಎಂ ಮೋದಿ ಇತ್ತೀಚೆಗೆ ಎಸ್‌ಸಿಒ ಶೃಂಗಸಭೆಯಲ್ಲಿ ಭಾಗವಹಿಸಲು ಹೋಗಿರಲಿಲ್ಲ. ಆದ್ದರಿಂದ ಪ್ರಧಾನಿ ಅವರ ಈ ರಷ್ಯಾ ಭೇಟಿ ಇನ್ನಷ್ಟು ಮಹತ್ವದ್ದಾಗಿದೆ.

              ಭಾರತ ಮತ್ತು ರಷ್ಯಾ ನಡುವಿನ ಸಂಬಂಧಗಳಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಈ ಮಾಸ್ಕೋ ಭೇಟಿ ಅತ್ಯಂತ ಮಹತ್ವದ್ದಾಗಿದೆ. ಇದು ಸಂಬಂಧಗಳನ್ನು ಮತ್ತಷ್ಟು ಬಲಪಡಿಸುತ್ತದೆ. ಉಭಯ ನಾಯಕರು ಅನೌಪಚಾರಿಕ ಮಾತುಕತೆಗಳನ್ನು ನಡೆಸಲು ಸಾಧ್ಯವಾಗುತ್ತದೆ. ಭಾರತ-ರಷ್ಯಾ ಸಂಬಂಧಗಳು ಕಾರ್ಯತಂತ್ರದ ಪಾಲುದಾರಿಕೆಯ ಮಟ್ಟದಲ್ಲಿವೆ ಎಂದು ಕ್ರೆಮ್ಲಿನ್ ವಕ್ತಾರ ಡಿಮಿಟ್ರಿ ಪೆಸ್ಕೋವ್​ ತಿಳಿಸಿದ್ದಾರೆ.

             ಪ್ರಧಾನಿ ಮೋದಿ ಅವರ ರಷ್ಯಾ ಭೇಟಿ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಈ ಉನ್ನತ ಮಟ್ಟದ ಭೇಟಿಯ ಬಗ್ಗೆ ಮಾಹಿತಿ ನೀಡಿದೆ. ಉಭಯ ನಾಯಕರು ಭಾರತ ಮತ್ತು ರಷ್ಯಾ ನಡುವಿನ ಬಹುಆಯಾಮದ ಸಂಬಂಧಗಳನ್ನು ಪರಿಶೀಲಿಸುತ್ತಾರೆ. ಪರಸ್ಪರ ಹಿತಾಸಕ್ತಿಯ ಸಮಕಾಲೀನ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಬಗ್ಗೆ ಚರ್ಚಿಸಲಿದ್ದಾರೆ ಎಂದು ಹೇಳಿದ್ದಾರೆ.

See alsoನಾನು ಮೋದಿ ಹತ್ರವೇ ಮಾತಾಡಿ ಬಂದೆ ಎಂದ ತುಳಸಿ ಗೌಡ ಹೇಳಿದ್ದೇನು?; ಪದ್ಮಶ್ರೀ ಪುರಸ್ಕೃತೆ ದೆಹಲಿಯಲ್ಲಿ ಮಿಸ್​ ಮಾಡ್ಕೊಂಡಿದ್ದೇನು?

             ಪ್ರಧಾನಿ ಮೋದಿ ಅವರು 2015ರಲ್ಲಿ ಮಾಸ್ಕೋಗೆ, 2019ರಲ್ಲಿ ಕೊನೆಯ ಬಾರಿಗೆ ರಷ್ಯಾದ ವ್ಲಾಡಿವೋಸ್ಟಾಕ್‌ಗೆ ಭೇಟಿ ನೀಡಿದ್ದರು. ಅಂದಿನಿಂದ ಉಭಯ ದೇಶಗಳ ನಡುವಿನ ಸಂಬಂಧಗಳಲ್ಲಿ ಸಾಕಷ್ಟು ಬದಲಾವಣೆಯಾಗಿದೆ. ಇಂದಿಗೂ ಭಾರತ ತನ್ನ ಹೆಚ್ಚಿನ ಶಸ್ತ್ರಾಸ್ತ್ರಗಳನ್ನು ರಷ್ಯಾದಿಂದ ಖರೀದಿಸುತ್ತದೆ.
                ಯೂಕ್ರೇನ್​​ ಯುದ್ಧದ ನಂತರ ಪ್ರಧಾನಿ ಮೋದಿ ಮೊದಲ ಬಾರಿಗೆ ರಷ್ಯಾಕ್ಕೆ ಭೇಟಿ ನೀಡಲಿದ್ದಾರೆ. ಈ ಭೇಟಿಯಲ್ಲಿ ತೆಗೆದುಕೊಳ್ಳುವ ನಿರ್ಧಾರಗಳು ಇಡೀ ಪ್ರಪಂಚದ ಮೇಲೆ ಪರಿಣಾಮ ಬೀರುತ್ತವೆ. ಆದ್ದರಿಂದ ಈ ಭೇಟಿಯ ಮೇಲೆ ಜಗತ್ತು ಕಣ್ಣಿಟ್ಟಿದೆ. ದ್ವಿಪಕ್ಷೀಯ ವಿಷಯಗಳಲ್ಲದೆ, ಇಬ್ಬರೂ ನಾಯಕರು ಅನೇಕ ಪ್ರಮುಖ ಜಾಗತಿಕ ವಿಷಯಗಳ ಬಗ್ಗೆಯೂ ಮಾತನಾಡಬಹುದು ಎಂದು ನಿರೀಕ್ಷಿಸಲಾಗುತ್ತಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries