ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಭಾರತೀಯ ಸೇನೆಯ ವಾಹನಗಳ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು, ಕನಿಷ್ಠ ಇಬ್ಬರು ಯೋಧರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಭಾರತೀಯ ಸೇನೆಯ ವಾಹನಗಳ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು, ಕನಿಷ್ಠ ಇಬ್ಬರು ಯೋಧರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ಕಥುವಾ ಜಿಲ್ಲೆಯ ಬದ್ನೋಟಾ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಕೆಲವು ಸೇನಾ ವಾಹನಗಳು ಈ ಪ್ರದೇಶಗಳಲ್ಲಿ ಗಸ್ತು ತಿರುಗುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಭದ್ರತಾ ಪಡೆಗಳು ಭಯೋತ್ಪಾದಕರ ಮೇಲೆ ಪ್ರತಿದಾಳಿ ನಡೆಸಿವೆ. ಈ ವೇಳೆ ಗುಂಡಿನ ಚಕಮಕಿಯಲ್ಲಿ ನಾಲ್ವರು ಯೋಧರು ಹುತಾತ್ಮರಾಗಿದ್ದು, ಆರು ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭದ್ರತಾ ಪಡೆಗಳು ಬಿಡುಬಿಟ್ಟಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.