HEALTH TIPS

ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಭವನ-ಸಾಂಸ್ಕøತಿಕ ಉತ್ಸವ, ಯಕ್ಷವೈಭವ ಸಂಪನ್ನ

                ಮಧೂರು: ಗಡಿನಾಡು ಕಾಸರಗೋಡಿನ ಸಿರಿಬಾಗಿಲಿನಲ್ಲಿ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಭವನದಲ್ಲಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸಹಯೋಗದೊಂದಿಗೆ  ನಾಲ್ಕು ದಿನಗಳ ಕಾಲ ನಡೆದ ಸಾಂಸ್ಕೃತಿಕ ಉತ್ಸವ ಸಂಪನ್ನಗೊಂಡಿತು. 


                  ಸಮರೋಪ ಸಮಾರಂಭದಲ್ಲಿ ಎಡನೀರು ಮಠಾಧೀಶರಾದ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ಮತ್ತು ಉಪ್ಪಳ ಕೊಂಡೆವೂರು ಮಠದ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ ಅವರು ಆಶೀರ್ವಚನ ನೀಡಿದರು. ಯಕ್ಷಗಾನದ ಬೆಳವಣಿಗೆ ಜತೆಗೆ  ಯಕ್ಷಗಾನ ಕಲೆಯನ್ನು ಮುಂದಿನ ಪೀಳಿಗೆಗೆ ತಲುಪಿಸುವ ಕೆಲಸ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಭವನದಿಂದ ನಡೆಯಲಿ ಎಂದು ಎಡನೀರು ಶ್ರೀಗಳು ತಮ್ಮ ಆಶೀರ್ವಚನದಲ್ಲಿ ತಿಳಿಸಿದರು.  ಉಪ್ಪಳ ಕೊಂಡೆವೂರು ಮಠದ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ ಆಶೀರ್ವಚನ ನೀಡಿ,  ಗ್ರಾಮೀಣ ಪ್ರದೇಶವಾದ ಸಿರಿಬಾಗಿಲಿನಲ್ಲಿ ಚಟುವಟಿಕೆ ನಡೆಸುತ್ತಿರುವ ಪ್ರತಿಷ್ಠಾನ ಯಕ್ಷಗಾನದ ಬಗ್ಗೆ ನಡೆಸುತ್ತಿರುವ ಕಾರ್ಯಯೋಜನೆಗಳು ಶ್ಲಾಘನೀಯ ಎಂದು ತಿಳಿಸಿದರು. 


                ಸಿರಿಬಾಗಿಲಿನಲ್ಲಿ ನಡೆದ ಸಿರಿಬಾಗಿಲು ಯಕ್ಷವೈಭವ ಕಾರ್ಯಕ್ರಮದಲ್ಲಿ 25ಕ್ಕೂ ಹೆಚ್ಚು ಪ್ರಮುಖ ತಂಡಗಳು ಪ್ರದರ್ಶನ ನೀಡುವ ಮೂಲಕ, ಹವ್ಯಾಸಿ ವಲಯದ ಕಲಾವಿದರು, ಯಕ್ಷಗಾನ  ವಿದ್ಯಾರ್ಥಿಗಳಿಗೆ ವೇದಿಕೆ ಕಲ್ಪಿಸಿಕೊಟ್ಟಿತ್ತು.  

             ಹಂಗಾರಕಟ್ಟೆ ಯಕ್ಷಗಾನ ಕೇಂದ್ರದ ಕಾರ್ಯದರ್ಶಿ ರಾಜಶೇಖರ ಹೆಬ್ಬಾರ್ ಅಧ್ಯಕ್ಷತೆ ವಹಿಸಿದ್ದರು.  ಈ ಸಂದರ್ಭ ಪ್ರತಿಷ್ಠಾನದ ಸದಸ್ಯತ್ವ ನೋಂದಾವಣೆಯ ಅಭಿಯಾನದ ದ್ವಿತೀಯ ಮಹಾಪೆÇೀಷಕರಾಗಿ ಬೆಂಗಳೂರಿನ ಟಿ. ಎಂ. ಸತೀಶ್ ಅವರಿಗೆ ಸದಸ್ಯತ್ವ ನೀಡಿ ಗೌರವಿಸಲಾಯಿತು. ಮಾಂಡೋವಿ ಮೋಟರ್ಸ್‍ನ ಪ್ರಬಂಧಕ ಶಶಿಧರ ಕಾರಂತ,  ಕನ್ನಡ ಸಾಹಿತ್ಯ ಪರಿಷತ್ತು ಗಡಿನಾಡು  ಘಟಕದ  ಅಧ್ಯಕ್ಷ ಡಾ. ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ, ಕರ್ನಾಟಕ ಬ್ಯಾಂಕಿನ ಸುಜಿತ್, ಶೀನ ಶೆಟ್ಟಿ ಕಜೆ, ಸಿರಿಬಾಗಿಲು ವೆಂಕಪ್ಪಯ್ಯ ಅವರ ಹಿರಿಯ ಪುತ್ರಿ  ಮಂಗಳ ಗೌರಿ ಕುದ್ರೆಪ್ಪಾಡಿ ಉಪಸ್ಥಿತರಿದ್ದರು.  ಗಡಿನಾಡ ಸಂಗೀತ ವಿದ್ವಾಂಸೆ ಶಕುಂತಲಾ ಕೆ. ಭಟ್ ಕುಂಚಿನಡ್ಕ ಅವರಿಗೆ ಸಿರಿಬಾಗಿಲು ವೆಂಕಪ್ಪಯ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಪ್ರತಿಷ್ಠಾನಕ್ಕೆ ಸಹಕಾರ ನೀಡಿದವರನ್ನು ಸ್ಮರಣಿಕೆ ನೀಡಿ ಗೌರವಿಸಲಾಯಿತು.


            ಈ ಸಂದರ್ಭ ಪ್ರತಿಷ್ಠಾನ ಪ್ರಕಾಶಿಸಿದ ಏಳು ಕೃತಿಗಳ ಬಗ್ಗೆ ವಿಚಾರ ಸಂಕಿರಣ ನಡೆಯಿತು. ವಿಚಾರ ಸಂಕಿರಣದಲ್ಲಿ ರಾಧಾಕೃಷ್ಣ ಕಲ್ಚಾರ್ ವಿಟ್ಲ, ಡಾ. ನಾಗವೇಣಿ ಮಂಚಿ, ಪತ್ರಕರ್ತ ಲಕ್ಷ್ಮೀ ಮಚ್ಚಿನ, ರಾಘವೇಂದ್ರ ಉಡುಪ ನೇರಳೆಕಟ್ಟೆ, ಕುಮಾರ ಸುಬ್ರಹ್ಮಣ್ಯ ಮುಳಿಯಾಲ ಮುಂತಾದವರು ಭಾಗವಹಿಸಿದರು..

             ಹವ್ಯಾಸಿ ತಂಡಗಳಲ್ಲಿ 22 ತೆಂಕುತಿಟ್ಟಿನ ತಂಡಗಳು ಹಾಗೂ ಪ್ರಥಮವಾಗಿ ಮೂರು ಬಡಗುಟ್ಟಿನ ತಂಡಗಳು ಭಾಗವಹಿಸಿರುತ್ತದೆ. ಪಾರ್ತಿಸುಬ್ಬನ ಜನ್ಮನಾಡಾದ ಕಾಸರಗೋಡು ಪ್ರದೇಶದಲ್ಲಿ ಅತ್ಯಂತ ವಿರಳವಾಗಿರುವ ಬಡಗು ತಿಟ್ಟಿನ ಪ್ರದರ್ಶನ ಪ್ರೇಕ್ಷಕರನ್ನು ರಂಜಿಸಿತು.   ಡಾ. ಶ್ರುತ ಕೀರ್ತಿರಾಜ್ ಉಜಿರೆ ಕಾರ್ಯಕ್ರಮ ನಿರೂಪಿಸಿದರು. ಪ್ರಸನ್ನ ಕಾರಂತ ದೇಶಮಂಲ ವಂದಿಸಿದರು.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries