ನವದೆಹಲಿ: ೪೦ಕ್ಕೂ ಹೆಚ್ಚು ಮಂದಿಯನ್ನು ಬಲಿತೆಗೆದುಕೊಂಡ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತ ದುರಂತಕ್ಕೆ ಕೇಂದ್ರ ಸಚಿವರು ಸಂತಾಪ ಸೂಚಿಸಿದ್ದಾರೆ.
ಎನ್‌ಡಿಆರ್‌ಎಫ್ ತಂಡವು ಯುದ್ಧದೋಪಾದಿಯಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ನಡೆಸುತ್ತಿದೆ ಮತ್ತು ಎರಡನೇ ತಂಡ ರಕ್ಷಣಾ ಕಾರ್ಯಾಚರಣೆಯನ್ನು ತೀವ್ರಗೊಳಿಸಲು ಹೊರಟಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಎಕ್ಸ್ ಮೂಲಕ ಮಾಹಿತಿ ನೀಡಿದರು. ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ ಅವರು, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದರು.
ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಹಲವು ಅಮೂಲ್ಯ ಜೀವಗಳು ಬಲಿಯಾಗಿದ್ದು, ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಕೇಂದ್ರ ಉನ್ನತ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡ ಪ್ರತಿಕ್ರಿಯಿಸಿದ್ದು, ಭೂಕುಸಿತದಲ್ಲಿ ಹಲವರು ಪ್ರಾಣ ಕಳೆದುಕೊಂಡಿದ್ದಾರೆ. ಸಿಕ್ಕಿಬಿದ್ದಿರುವ ಜನರನ್ನು ಆದಷ್ಟು ಶೀಗ್ರ ರಕ್ಷಿಸಬಹುದು ಎಂದು ಹೇಳಿದರು.
ಮಂಗಳವಾರ ಮುಂಜಾನೆ ವಯನಾಡಿನ ಮುಂಡಕೈ, ಚುರಲ್ಮಲಾ ಮತ್ತು ಅಟ್ಟಮಲ ಪ್ರದೇಶಗಳಲ್ಲಿ ಭೂಕುಸಿತ ಸಂಭವಿಸಿದ್ದು, ಭಾರೀ ಅನಾಹುತಕ್ಕೆ ಕಾರಣವಾಗಿದೆ. ವರದಿಯು ಈಗಾಗಲೇ ೫೦ ಜನರ ಸಾವನ್ನು ದೃಢಪಡಿಸಿದೆ. ಹಲವು ಮನೆಗಳು, ಕಟ್ಟಡಗಳು ಕೊಚ್ಚಿ ಹೋಗಿವೆ. ನೂರಾರು ಮಂದಿ ನಾಪತ್ತೆಯಾಗಿದ್ದಾರೆ. ಮುಂಡಕೈಯಲ್ಲಿ ಬಹುತೇಕ ಮನೆಗಳು ಶಿಥಿಲಗೊಂಡಿವೆ. ಸೇನೆ, ವಾಯು ಮತ್ತು ನೌಕಾ ಪಡೆಗಳು ರಕ್ಷಣಾ ಕಾರ್ಯಾಚರಣೆಗೆ ಜಂಟಿ ಪ್ರಯತ್ನ ನಡೆಸುತ್ತಿವೆ. ಎಜಿಮಲದಿಂದ ನೌಕಾಪಡೆ ತಂಡವು ವಿಪತ್ತು ಪ್ರದೇಶಕ್ಕೆ ಆಗಮಿಸಿವೆ. ಸೇನೆಯ ಇಂಜಿನಿಯರಿAಗ್ ಗ್ರೂಪ್ ಕೂಡ ದುರಂತದ ಪ್ರದೇಶಕ್ಕೆ ತೆರಳಿದೆ.