ಮುಂಬೈ: ಮುಂಬೈನ ಹಲವು ಪ್ರದೇಶಗಳಲ್ಲಿ ಮಂಗಳವಾರವೂ ಮಳೆ ಮುಂದುವರಿದಿದ್ದು ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.
ಮುಂಬೈ: ಮುಂಬೈನ ಹಲವು ಪ್ರದೇಶಗಳಲ್ಲಿ ಮಂಗಳವಾರವೂ ಮಳೆ ಮುಂದುವರಿದಿದ್ದು ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.
ಮಳೆ ಸಂಬಂಧಿತ ಅವಘಡಗಳಲ್ಲಿ ಸೋಮವಾರ ರಾತ್ರಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ವ್ಯಾಪಕವಾಗಿ ಮಳೆಯಾಗುತ್ತಿರುವ ಪ್ರದೇಶಗಳಲ್ಲಿ ಶಾಲಾ-ಕಾಲೇಜುಗಳೆಗೆ ರಜೆ ಘೋಷಣೆ ಮಾಡಲಾಗಿದೆ.
ಹವಾಮಾನ ಇಲಾಖೆಯು ಮುಂದಿನ 24 ಗಂಟೆಗಳಲ್ಲಿ ಹೆಚ್ಚು ಮಳೆ ಸುರಿಯಲಿದೆ ಎಂದು ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಸ್ಥಳೀಯ ಆಡಳಿತವೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದೆ. ಕೆಲವು ಪ್ರದೇಶಗಳ ಸರ್ಕಾರಿ ಕಚೇರಿಗಳಿಗೂ ರಜೆ ನೀಡಲಾಗಿದೆ. ರೈಲ್ವೆ ಇಲಾಖೆಯು ಮಂಗಳವಾರ ಹಲವು ರೈಲುಗಳ ಸಂಚಾರವನ್ನು ಸ್ಥಗಿತಗೊಳಿಸಿದೆ.
ಸೋಮವಾರ 30 ಸೆಂ.ಮೀಗೂ ಹೆಚ್ಚು ಪ್ರಮಾಣದ ಮಳೆಯಾಗಿದ್ದು ರಸ್ತೆ ಸಂಚಾರ, ವಿಮಾನ ಹಾಗೂ ಉಪನಗರ ರೈಲು ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿತ್ತು. ಹಳಿಗಳು ಮುಚ್ಚಿಹೋಗುವಷ್ಟು ನೀರು ನಿಂತಿತ್ತು. ಸುಮಾರು 50 ವಿಮಾನಗಳ ಹಾರಾಟ ರದ್ದಾಗಿತ್ತು.