ಜಮ್ಮು: ಅನುಮಾನಾಸ್ಪದ ಚಟುವಟಿಕೆ ಬಗ್ಗೆ ಮಾಹಿತಿ ಲಭ್ಯವಾಗುತ್ತಿದ್ದಂತೆಯೇ ಜಮ್ಮು ಜಿಲ್ಲೆಯ ಗಡಿಯಲ್ಲಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಆರಂಭಿಸಿವೆ ಎಂದು ಅಧಿಕಾರಿಗಳು ತಿಳಿಸಿದರು.
ಜಮ್ಮು: ಅನುಮಾನಾಸ್ಪದ ಚಟುವಟಿಕೆ ಬಗ್ಗೆ ಮಾಹಿತಿ ಲಭ್ಯವಾಗುತ್ತಿದ್ದಂತೆಯೇ ಜಮ್ಮು ಜಿಲ್ಲೆಯ ಗಡಿಯಲ್ಲಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಆರಂಭಿಸಿವೆ ಎಂದು ಅಧಿಕಾರಿಗಳು ತಿಳಿಸಿದರು.
ಭದ್ರತಾ ಪಡೆಗಳು ಎಚ್ಚರಿಕೆಯಿಂದ ಕಾರ್ಯನಿರ್ವಹಿಸುತ್ತಿದ್ದು, ಅನುಮಾನಾಸ್ಪದ ಚಟುವಟಿಕೆ ಬಗ್ಗೆ ಮಾಹಿತಿ ಹಂಚಿಕೊಳ್ಳುವಂತೆ ನಾಗರಿಕರನ್ನು ಕೋರಿವೆ.
ಸೇನೆ, ಪೊಲೀಸ್, ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಜಂಟಿಯಾಗಿ ಗುಡಾ ಪಾಟಣ್, ಕಾನಾ ಚಕ್ ಪ್ರದೇಶಗಳಲ್ಲಿ ಕಾರ್ಯಾಚರಣೆ ನಡೆಸುತ್ತಿವೆ. ಕೃಷಿ ಭೂಮಿ, ಗ್ರಾಮಗಳು ಮತ್ತಿತರ ಸ್ಥಳಗಳಲ್ಲಿ ಶೋಧ ಮುಂದುವರಿಸಿವೆ ಎಂದು ಹೇಳಿದರು.