ಅಸ್ತಾನ : ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಚೀನಾದ ವಿದೇಶಾಂಗ ಸಚಿವ ವಾಂಗ್ ಯೀ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಅಸ್ತಾನ : ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಚೀನಾದ ವಿದೇಶಾಂಗ ಸಚಿವ ವಾಂಗ್ ಯೀ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಕಜಕಸ್ತಾನದಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಸ್ಥೆಯ (ಎಸ್‌ಸಿಒ) ನಾಯಕರ ವಾರ್ಷಿಕ ಸಭೆಯ ವೇಳೆ ಈ ಭೇಟಿ ನಡೆದಿದೆ.
ಈ ಕುರಿತು ಭಾರತೀಯ ವಿದೇಶಾಂಗ ಸಚಿವಾಲಯ ಮಾಹಿತಿ ಹಂಚಿಕೊಂಡಿದೆ.
2020ರಿಂದ ಈಚೆಗೆ ಭಾರತ-ಚೀನಾ ಮಧ್ಯೆ ಪೂರ್ವ ಲಡಾಖ್ ಸೇರಿದಂತೆ ವಾಸ್ತವಿಕ ಗಡಿ ನಿಯಂತ್ರಣ ರೇಖೆ(ಎಲ್‌ಎಸಿ)ಯಲ್ಲಿ ಗಡಿ ವಿವಾದ ಉಲ್ಬಣಿಸಿದೆ. ಈ ಹಿನ್ನೆಲೆಯಲ್ಲಿ ಈ ಭೇಟಿ ಹೆಚ್ಚಿನ ಮಹತ್ವ ಗಿಟ್ಟಿಸಿಕೊಂಡಿದೆ.
ಅಸ್ತಾನದಲ್ಲಿರುವ ಮಹಾತ್ಮ ಗಾಂಧಿ ಅವರ ಪುತ್ಥಳಿಗೆ ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರು ಬುಧವಾರ ನಮನ ಸಲ್ಲಿಸಿದ್ದರು. ಅಲ್ಲದೆ ಹಲವು ಜಾಗತಿಕ ನಾಯಕರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದರು.