HEALTH TIPS

ನವಿ ಮುಂಬೈ | ನಾಲ್ಕು ಅಂತಸ್ತಿನ ಕಟ್ಟಡ ಕುಸಿತ; ಒಬ್ಬ ಸಾವು, ಇಬ್ಬರು ನಾಪತ್ತೆ

           ಮುಂಬೈ: ನವಿ ಮುಂಬೈನ ಬೇಲಾಪುರ ಪ್ರದೇಶದಲ್ಲಿ ಶನಿವಾರ ಮುಂಜಾನೆ ನಾಲ್ಕು ಅಂತಸ್ತಿನ ವಸತಿ ಕಟ್ಟಡ ಕುಸಿದು ಬಿದ್ದಿದೆ. ಘಟನೆಯಲ್ಲಿ ಒಬ್ಬ ವ್ಯಕ್ತಿ ಸಾವಿಗೀಡಾಗಿದ್ದು, ಅವಶೇಷಗಳಡಿಯಲ್ಲಿ ಸಿಲುಕಿರುವ ಇನ್ನಿಬ್ಬರನ್ನು ಪತ್ತೆ ಮಾಡಲು ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

             ಮೃತನನ್ನು ಮೊಹಮ್ಮದ್ ಮಿರಾಜ್ ಎಂದು ಗುರುತಿಸಲಾಗಿದೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮುಂಜಾನೆ 4.50ಕ್ಕೆ ಘಟನೆ ಸಂಭವಿಸಿದೆ. ಈವರೆಗೆ ಇಬ್ಬರನ್ನು ರಕ್ಷಿಸಲಾಗಿದೆ ಎಂದು ಅವರು ಹೇಳಿದ್ದಾರೆ.


            13 ವಸತಿ ಘಟಕಗಳು ಮತ್ತು ಮೂರು ಅಂಗಡಿಗಳನ್ನು ಹೊಂದಿರುವ ನಾಲ್ಕು ಅಂತಸ್ತಿನ ಕಟ್ಟಡವು ಇಂದು ಮುಂಜಾನೆ ಕುಸಿದಿದೆ. ಕಟ್ಟಡ ಕುಸಿಯುವ ಮೊದಲು ಅಧಿಕಾರಿಗಳು 52 ನಿವಾಸಿಗಳನ್ನು ಸ್ಥಳಾಂತರಿಸಿದ್ದರು. ಅವಶೇಷಗಳಡಿಯಲ್ಲಿ ಸಿಲುಕಿದ್ದ ಒಬ್ಬ ಪುರುಷ ಮತ್ತು ಮಹಿಳೆಯನ್ನು( ಲಾಲ್ ಮೊಹಮ್ಮದ್ ಮತ್ತು ರುಖ್ಸಾನಾ) ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ನವಿ ಮುಂಬೈ ಮಹಾನಗರ ಪಾಲಿಕೆ (ಎನ್‌ಎಂಎಂಸಿ) ಆಯುಕ್ತ ಕೈಲಾಸ್ ಶಿಂಧೆ ತಿಳಿಸಿದ್ದಾರೆ.

ಕುಸಿದ ಕಟ್ಟಡ ಕೇವಲ10 ವರ್ಷ ಹಳೆಯದು. ಕೆಲವು ನಿವಾಸಿಗಳು ಕಟ್ಟಡದಲ್ಲಿ ಬಿರುಕು ಬಿಟ್ಟಿರುವುದನ್ನು ಗಮನಿಸಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ತಂಡ 13 ಮಕ್ಕಳು ಸೇರಿದಂತೆ 52 ನಿವಾಸಿಗಳನ್ನು ಕಟ್ಟಡದಿಂದ ಸ್ಥಳಾಂತರಿಸಿದ್ದರು. ಬಳಿಕ ಕಟ್ಟಡ ಕುಸಿದಿದೆ.

             ರಕ್ಷಣಾ ಕಾರ್ಯಾಚರಣೆಯಲ್ಲಿ ಸಹಾಯಕ್ಕಾಗಿ ಶ್ವಾನ ದಳವನ್ನು ನಿಯೋಜಿಸಲಾಗಿದೆ ಎಂದು ಎನ್‌ಡಿಆರ್‌ಎಫ್ ಅಧಿಕಾರಿ ತಿಳಿಸಿದ್ದಾರೆ. ಘಟನೆಯ ಬಗ್ಗೆ ಎನ್‌ಎಂಎಂಸಿ ತನಿಖೆ ನಡೆಸಲಿದೆ ಎಂದು ಶಿಂಧೆ ಹೇಳಿದ್ದಾರೆ.

              ನೀತಿ ಆಯೋಗದ ಸಭೆಯಲ್ಲಿ ಭಾಗಿಯಾಗಲು ಮುಖ್ಯಮಂತ್ರಿ ಏಕನಾಥ್ ಶಿಂಧೆ ದೆಹಲಿಗೆ ತೆರಳಿದ್ದಾರೆ. ಈ ನಡುವೆ ಅವರು ನವಿ ಮುಂಬೈ ಮಹಾನಗರ ಪಾಲಿಕೆ ಆಯುಕ್ತರೊಂದಿಗೆ ಮಾತನಾಡಿದ್ದು, ರಕ್ಷಿಸಲ್ಪಟ್ಟ ಗಾಯಾಳುಗಳು ಮತ್ತು ಸಂತ್ರಸ್ತರಿಗೆ ಅಗತ್ಯ ನೆರವು ನೀಡುವಂತೆ ಸೂಚಿಸಿದ್ದಾರೆ ಎಂದು ಥಾಣೆ ಜಿಲ್ಲಾಡಳಿತದ ಅಧಿಕೃತ ಪ್ರಕಟಣೆ ತಿಳಿಸಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries