ಬದಿಯಡ್ಕ: ಎಡನೀರು ಮಠಾಧೀಶರಾದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಗಳವರ ನಾಲ್ಕನೇ ಚಾತುರ್ಮಾಸ್ಯ ವೃತಾಚರಣೆಯು ಜುಲೈ 21 ರಿಂದ ಸೆಪ್ಟೆಂಬರ್ 18ರ ತನಕ ಎಡನೀರು ಶ್ರೀಮಠದಲ್ಲಿ ವಿವಿಧ ಧಾರ್ಮಿಕ ಸಾಂಸ್ಕøತಿಕ ಕಾರ್ಯಕ್ರಮಗಳೊಂದಿಗೆ ಜರಗಲಿರುವುದು. ಕಾರ್ಯಕ್ರಮದ ಪೂರ್ವಭಾವಿಯಾಗಿ ಮಾನ್ಯ ವಲಯ ಸಮಿತಿಯ ಸಭೆಯು ಇತ್ತೀಚೆಗೆ ಮಾನ್ಯ ಶ್ರೀ ಅಯ್ಯಪ್ಪ ಭಜನಾ ಮಂದಿರದ ಸಭಾಂಗಣದಲ್ಲಿ ಪುದುಕೋಳಿ ಶ್ರೀಕೃಷ್ಣ ಭಟ್ಟರ ಅಧ್ಯಕ್ಷತೆಯಲ್ಲಿ ನಡೆಯಿತು.
ಚಾತುರ್ಮಾಸ್ಯ ಸಮಿತಿಯ ಕಾರ್ಯದರ್ಶಿ ಸೂರ್ಯನಾರಾಯಣ ಭಟ್ ಎಡನೀರು ಇವರು ಎರಡು ತಿಂಗಳುಗಳ ಕಾಲ ಶ್ರೀಮಠದಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳ ಬಗ್ಗೆ ಸಮಗ್ರ ಮಾಹಿತಿ ನೀಡಿದರು. ಚಾತುರ್ಮಾಸ್ಯ ಸಮಿತಿಯ ಸಂಚಾಲಕ ಸತೀಶ್ ರಾವ್ ಎಡನೀರು, ಬದಿಯಡ್ಕ ಗ್ರಾಮ ಪಂಚಾಯತಿ ಜನಪ್ರತಿನಿಧಿ ಶ್ಯಾಮಪ್ರಸಾದ್ ಮಾನ್ಯ,ಪ್ರೊ.ಎ. ಶ್ರೀನಾಥ್ ಕೊಲ್ಲಂಗಾನ, ನಿತ್ಯಾನಂದ ಮಾನ್ಯ, ಎಮ್ ಎಚ್ ಜನಾರ್ಧನ, ಮಂಜುನಾಥ ಮಾನ್ಯ ಮೊದಲಾದವರು ಉಪಸ್ಥಿತರಿದ್ದರು. ವಿಜಯ್ ಕುಮಾರ್ ಮಾನ್ಯ ಸ್ವಾಗತಿಸಿ ಸುಂದರ ಶೆಟ್ಟಿ ಕೊಲ್ಲಂಗಾನ ವಂದಿಸಿದರು.
ಈ ಸಂದರ್ಭದಲ್ಲಿ ಮಾನ್ಯ ವಲಯ ಸಮಿತಿಯನ್ನು ರೂಪಿಕರಿಸಲಾಯಿತು. ಅಧ್ಯಕ್ಷರಾಗಿ ಪಿ ಶ್ರೀಕೃಷ್ಣ ಭಟ್ ಪುದುಕೋಳಿ, ಉಪಾಧ್ಯಕ್ಷರಾಗಿ ರಾಮ ಕೆ ಕಾರ್ಮಾರು, ಪ್ರಧಾನ ಕಾರ್ಯದರ್ಶಿ ಮಹೇಶ್ ವಳಕುಂಜ, ಕಾರ್ಯದರ್ಶಿ ವಿಜಯ್ ಕುಮಾರ್ ಮಾನ್ಯ ಹಾಗೂ ಕೋಶಾಧಿಕಾರಿಗಳಾಗಿ ಶ್ಯಾಮ್ ಪ್ರಸಾದ್ ಮಾನ್ಯ ಇವರನ್ನು ಆರಿಸಲಾಯಿತು.