ಬೀಜಿಂಗ್: ಗಡಿ ವಿಚಾರವಾಗಿ ಉಭಯ ದೇಶಗಳ ನಡುವೆ ಉಲ್ಬಣಗೊಂಡಿರುವ ಸಮಸ್ಯೆಗಳನ್ನು ಸೂಕ್ತವಾಗಿ ಬಗೆಹರಿಸುವ ನಿಟ್ಟಿನಲ್ಲಿ ಭಾರತದೊಂದಿಗೆ ಸಹಕರಿಸಲು ಸಿದ್ಧವಿರುವುದಾಗಿ ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಹೇಳಿದ್ದಾರೆ.
ಬೀಜಿಂಗ್: ಗಡಿ ವಿಚಾರವಾಗಿ ಉಭಯ ದೇಶಗಳ ನಡುವೆ ಉಲ್ಬಣಗೊಂಡಿರುವ ಸಮಸ್ಯೆಗಳನ್ನು ಸೂಕ್ತವಾಗಿ ಬಗೆಹರಿಸುವ ನಿಟ್ಟಿನಲ್ಲಿ ಭಾರತದೊಂದಿಗೆ ಸಹಕರಿಸಲು ಸಿದ್ಧವಿರುವುದಾಗಿ ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಹೇಳಿದ್ದಾರೆ.
ಅಜಿತ್ ಡೋಭಾಲ್ ಅವರು ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ಮರುನೇಮಕವಾದ ಹಿನ್ನೆಲೆಯಲ್ಲಿ ವಾಂಗ್ ಅವರು ಶುಭಕೋರಲು ಮಂಗಳವಾರ ಕಳುಹಿಸಿದ್ದ ಸಂದೇಶದಲ್ಲಿ ಈ ವಿಚಾರ ತಿಳಿಸಿದ್ದಾರೆ.
'ಗಡಿ ವಿಚಾರವಾಗಿ ಎರಡೂ ದೇಶಗಳು ಒಮ್ಮತಕ್ಕೆ ಬರಬೇಕಿದೆ. ಗಡಿಯಲ್ಲಿ ಉದ್ಭವವಾಗಿರುವ ಬಿಕ್ಕಟ್ಟು ಬಗೆಹರಿಸಿಕೊಳ್ಳಲು ನಾವು ಭಾರತದೊಂದಿಗೆ ಸಹಕರಿಸಲು ಸಿದ್ಧವಿದ್ದೇವೆ. ಈ ಮೂಲಕ ಗಡಿಯಲ್ಲಿ ಶಾಂತಿ ಸ್ಥಾಪನೆ ಮಾಡಬೇಕಿದೆ' ಎಂದು ವಾಂಗ್ ಅವರು ಡೋಭಾಲ್ ಅವರಿಗೆ ತಿಳಿಸಿರುವುದಾಗಿ ಚೀನಾ ಮಾಧ್ಯಮಗಳು ವರದಿ ಮಾಡಿವೆ.