ತಿರುವನಂತಪುರಂ: ಅಮೈಝಾಂಚನ್ ತೊರೆಯಲ್ಲಿ ಪ್ಲಾಸ್ಟಿಕ್ ತ್ಯಾಜ್ಯದಿಂದ ಉಸಿರುಗಟ್ಟಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಬೆನ್ನಲ್ಲೇ ರಾಜ್ಯ ಸರ್ಕಾರದ ಅಧಿಕಾರಿಗಳು ಮತ್ತೆ ತಪಾಸಣೆಯ ಪ್ರಹಸನಕ್ಕೆ ಇಳಿದಿದ್ದಾರೆ.
ನಿಷೇಧಿತ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್ ಗಳನ್ನು ವಶಪಡಿಸಿಕೊಳ್ಳುವಂತೆ ಸ್ಥಳೀಯಾಡಳಿತ ಸಂಸ್ಥೆಗಳಿಗೆ ಸೂಚನೆ ನೀಡಲಾಗಿದೆ.
ರಾಜ್ಯದಲ್ಲಿ ಪ್ಲಾಸ್ಟಿಕ್ ನಿಷೇಧವು ಜನವರಿ 2020 ರಿಂದ ಜಾರಿಗೆ ಬಂದಿತ್ತು. ಆದರೆ ಅದನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಸರ್ಕಾರ ಮುಂದಾಗಿರಲಿಲ್ಲ. ಕೇರಳದಲ್ಲಿ ಪ್ಲಾಸ್ಟಿಕ್ ಉತ್ಪಾದನೆ ನಿಲ್ಲಿಸಿದ್ದು ಬಿಟ್ಟರೆ ಬೇರೆ ರಾಜ್ಯಗಳಿಂದ ತರುವುದನ್ನು ತಡೆಯಲು ಕ್ರಮ ಕೈಗೊಂಡಿಲ್ಲ. ವ್ಯಾಪಾರಿಗಳು ಮತ್ತು ಇತರರು ಇದನ್ನು ಮುಕ್ತವಾಗಿ ಬಳಸುತ್ತಿದ್ದರು. ಲಂಚ ಕೊಡದವರಿಗೆ ಹಗೆ ತೀರಿಸಲು ಮಾತ್ರ ಹಲವು ಅಧಿಕಾರಿಗಳು ಇಂತಹ ಸಂಸ್ಥೆಗಳಿಗೆ ನುಗ್ಗಿ ಪ್ಲಾಸ್ಟಿಕ್ ಜಪ್ತಿ ಮಾಡಿ ದಂಡ ವಿಧಿಸುತ್ತಿದ್ದರು.
ಪ್ಲಾಸ್ಟಿಕ್ ನಿಷೇಧವನ್ನು ಗಂಭೀರವಾಗಿ ಪರಿಗಣಿಸಲು ರಾಜ್ಯ ಸರ್ಕಾರ ಸಿದ್ಧವಿಲ್ಲದ ಕಾರಣ ಅಧಿಕಾರಿಗಳು ತಪಾಸಣೆಯಿಂದ ಹಿಂದೆ ಸರಿದಿದ್ದಾರೆ. ಏಕ ಬಳಕೆ ಮತ್ತು 50 ಮೈಕ್ರಾನ್‍ಗಿಂತ ಕಡಿಮೆ ಪ್ಲಾಸ್ಟಿಕ್ ಉತ್ಪನ್ನಗಳನ್ನು ನಿಷೇಧಿಸಲಾಗಿತ್ತು.
ಅಧಿಕಾರಿಗಳು ಇಇದೀಗ ವಿವಿಧೆಡೆ ಅಂಗಡಿಗಳ ಮೇಲೆ ದಾಳಿ ನಡೆಸಿ ಕ್ಯಾರಿ ಬ್ಯಾಗ್‍ಗಳನ್ನು ವಶಪಡಿಸಿಕೊಳ್ಳುತ್ತಿದ್ದಾರೆ. ನಿಷೇಧಿತ ಪ್ಲಾಸ್ಟಿಕ್ ಸಂಗ್ರಹಿಸಿದರೆ ಅಥವಾ ವಿತರಿಸಿದರೆ 10 ಸಾವಿರ ರೂ.ವರೆಗೆ ಶುಲ್ಕ ವಿಧಿಸಲಾಗುವುದು ಎಂದು ನೋಟಿಸ್ ನಲ್ಲಿ ತಿಳಿಸಲಾಗಿದೆ.