ಕೋಝಿಕ್ಕೋಡ್: ಜ್ವರ ಬಾಧಿಸಿ ವಿದ್ಯಾರ್ಥಿನಿ ಮೃತಪಟ್ಟ ಘಟನೆ ನಡೆದಿದೆ. ಕೋಯಿಕ್ಕೋಡ್ ಎಲೆಟ್ ನ ಸ್ಥಳೀಯ ಶರೀಫ್ ಅವರ ಪುತ್ರಿ ಫಾತಿಮಾ ಬತುಲ್ (10) ಮೃತ ಬಾಲಕಿ.
ಬಾಲಕಿ ಕೋಝಿಕ್ಕೋಡ್ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಜ್ವರದಿಂದ ಬಳಲುತ್ತಿದ್ದ ಮಗುವನ್ನು ಮೊದಲು ಮನೆಯ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ನಾಲ್ಕು ದಿನಗಳ ಹಿಂದೆ ಕೋಝಿಕ್ಕೋಡ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಇಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಲಕಿ ಶನಿವಾರ ಬೆಳಗ್ಗೆ ಮೃತಪಟ್ಟಿದ್ದಾಳೆ.