ತಿರುವನಂತಪುರಂ: ರಾಜ್ಯದಲ್ಲಿ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಕೇಂದ್ರ ತಿಳಿಸಿದೆ. ಉತ್ತರ ಕೇರಳದಲ್ಲಿ ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಮಲಪ್ಪುರಂ, ಕೋಯಿಕ್ಕೋಡ್, ವಯನಾಡು, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ನಿನ್ನೆ ಹಳದಿ ಅಲರ್ಟ್ ಘೋಷಿಸಲಾಗಿತ್ತು.
ಇಂದು ಹಾಗೂ ನಾಳೆ(ಬುಧವಾರ) ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಗುಡ್ಡಗಾಡು ಪ್ರದೇಶಗಳಲ್ಲಿ ಭಾರೀ ಮಳೆ ಮುಂದುವರಿಯಲಿದೆ. ಬಲವಾದ ಗಾಳಿ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಕೇರಳ, ಕರ್ನಾಟಕ ಮತ್ತು ಲಕ್ಷದ್ವೀಪ ಕರಾವಳಿಯಲ್ಲಿ ಮೀನುಗಾರಿಕೆ ನಿಷೇಧ ಮುಂದುವರಿಯಲಿದೆ. ಕೇರಳ ಕರಾವಳಿಯಲ್ಲಿ ಅಲೆಗಳು ಎತ್ತರಕ್ಕೆ ಬಂದು ಸಮುದ್ರ ದಡಕ್ಕಪ್ಪಳಿಸಲಿದೆ. ಇದರಿಂದ ಮೀನುಗಾರರು ಮತ್ತು ಕರಾವಳಿ ನಿವಾಸಿಗಳು ಎಚ್ಚರಿಕೆ ವಹಿಸಬೇಕು. ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳ ಕರಾವಳಿಯಲ್ಲಿ ವಿಶೇಷ ಎಚ್ಚರಿಕೆ ನೀಡಲಾಗಿದೆ.