ಕಾಸರಗೋಡು: ನಗರದ ಬಿ.ಇ.ಎಂ. ಪ್ರೌಢ ಶಾಲೆಯಲ್ಲಿ 2024-25ನೇ ಶೈಕ್ಷಣಿಕ ವರ್ಷದ ವಿದ್ಯಾರಂಗ ಕಲಾ ಸಾಹಿತ್ಯ ವೇದಿಕೆಯ ಉದ್ಘಾಟನಾ ಸಮಾರಂಭ ಇತ್ತೀಚೆಗೆ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯ ಗಣೇಶ್ ಅವರು ವಹಿಸಿದ್ದರು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಕವಯತ್ರಿ ದಿವ್ಯಗಟ್ಟಿ ಪರಕ್ಕಿಲ ಅವರು ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ, ವಿದ್ಯಾರಂಗ ಕಲಾ ಸಾಹಿತ್ಯ ವೇದಿಕೆಯು ವಿದ್ಯಾರ್ಥಿಗಳ ಪ್ರತಿಭೆಯನ್ನು ಬೆಳಗಿಸುವುದಕ್ಕೆ ಸೂಕ್ತ ವೇದಿಕೆ ಎಂದು ತಿಳಿಸಿದರು.
ಶಾಲಾ ವಿದ್ಯಾರ್ಥಿಗಳು ರಚಿಸಿದಂತಹ `ದಾರಿದೀಪ' ಸಂಚಿಕೆಯನ್ನು ಬಿಡುಗಡೆಗೊಳಿಸಲಾಯಿತು. ಅಧ್ಯಾಪಿಕೆಯರಾದ ಶೆರ್ಲಿ ಹಾಗೂ ರಕ್ಷಿತಾ ಶುಭಹಾರೈಸಿದರು. ಕಾರ್ಯಕ್ರಮದಲ್ಲಿ ಶಾಲಾ ಅಧ್ಯಾಪಕರಾದ ಬಾಲಕೃಷ್ಣ, ಮುರಳಿ ಮಾಧವ ಹಾಗೂ ಯಶವಂತ ವೈ. ಉಪಸ್ಥಿತರಿದ್ದರು. ವಿದ್ಯಾರಂಗ ಕಲಾ ಸಾಹಿತ್ಯ ವೇದಿಕೆಯ ಸಂಚಾಲಕಿ ಸೌಮ್ಯ ಮಯ್ಯ ್ಲ ಸ್ವಾಗತಿಸಿ, ಮಾನಸ ವಂದಿಸಿದರು. ಶಿಕ್ಷಕಿ ರೋಹಿತಾಕ್ಷಿ ಕಾರ್ಯಕ್ರಮವನ್ನು ನಿರೂಪಿಸಿದರು.