ಇಟಾನಗರ: ನಿವೃತ್ತ ಅಗ್ನಿವೀರರಿಗೆ ಸರ್ಕಾರದ ವಿವಿಧ ಇಲಾಖೆಯ ನೇಮಕಾತಿಯಲ್ಲಿ ಮೀಸಲಾತಿ ನಿಗದಿಗೊಳಿಸಿ ಅರುಣಾಚಲ ಪ್ರದೇಶ, ರಾಜಸ್ಥಾನ ಸರ್ಕಾರ ನಿರ್ಧಾರ ಕೈಗೊಂಡಿದೆ.
ಇಟಾನಗರ: ನಿವೃತ್ತ ಅಗ್ನಿವೀರರಿಗೆ ಸರ್ಕಾರದ ವಿವಿಧ ಇಲಾಖೆಯ ನೇಮಕಾತಿಯಲ್ಲಿ ಮೀಸಲಾತಿ ನಿಗದಿಗೊಳಿಸಿ ಅರುಣಾಚಲ ಪ್ರದೇಶ, ರಾಜಸ್ಥಾನ ಸರ್ಕಾರ ನಿರ್ಧಾರ ಕೈಗೊಂಡಿದೆ.
'ಅರುಣಾಚಲ ಪ್ರದೇಶ ಸರ್ಕಾರವು 'ಅಗ್ನಿಪಥ' ಯೋಜನೆ ಅಡಿಯಲ್ಲಿ ಸೇರ್ಪಡೆಯಾಗಲು ಬಯಸುವ ಸ್ಥಳೀಯ ಯುವಕರಿಗೆ ತರಬೇತಿ ನೀಡಲಿದ್ದು, ನಿವೃತ್ತಿಯಾಗುವ 'ಅಗ್ನಿವೀರ'ರಿಗೆ ರಾಜ್ಯ ತುರ್ತು ಹಾಗೂ ಅಗ್ನಿಶಾಮಕ ಸೇವೆ, ಪೊಲೀಸ್ ಇಲಾಖೆಯಲ್ಲಿ ಆದ್ಯತೆ ನೀಡಲಾಗುವುದು' ಎಂದು ಮುಖ್ಯಮಂತ್ರಿ ಪೆಮಾ ಖಂಡು ಘೋಷಿಸಿದರು.
'ಸರ್ಕಾರದ ಈ ನಿರ್ಧಾರವು ರಾಜ್ಯದ ಯುವಕರು ದೇಶಸೇವೆ ಮಾಡಲು ಅನುವು ಮಾಡಿಕೊಡುತ್ತದೆ' ಎಂದರು.
ಮೀಸಲಾತಿ-ಶರ್ಮಾ: 'ಬಂಧೀಖಾನೆ, ಅರಣ್ಯ ಇಲಾಖೆ ಹಾಗೂ ರಾಜ್ಯ ಪೊಲೀಸ್ ಇಲಾಖೆಯ ನೇಮಕಾತಿಗಳಲ್ಲಿ ನಿವೃತ್ತ ಅಗ್ನಿವೀರರಿಗೆ ಮೀಸಲಾತಿ ನೀಡಲಾಗುವುದು' ಎಂದು ರಾಜಸ್ಥಾನ ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ ಶನಿವಾರ ಘೋಷಿಸಿದರು. ಶನಿವಾರ 'ಕಾರ್ಗಿಲ್ ವಿಜಯ್ ದಿವಸ್' ಕಾರ್ಯಕ್ರಮದಲ್ಲಿ ಭಾಗವಹಿಸಿ ಈ ಘೋಷಣೆ ಮಾಡಿದರು.