ರಾಜ್ಯ ಸಚಿವಾಲಯ 'ಮಂತ್ರಾಲಯ'ದಲ್ಲಿ ಸೋಮವಾರ ಸಂಜೆ ನಡೆಯಲಿರುವ ಸಮಾರಂಭದಲ್ಲಿ ಕರೀರ್ ಅವರು ಸೌನಿಕ್ ಅವರಿಗೆ ಅಧಿಕಾರ ಹಸ್ತಾಂತರಿಸಲಿದ್ದಾರೆ ಎಂದು ವರದಿಯಾಗಿದೆ.
ಮುಂಬೈ: ಮಹಾರಾಷ್ಟ್ರ ಸರ್ಕಾರದ ಮೊದಲ ಮಹಿಳಾ ಮುಖ್ಯ ಕಾರ್ಯದರ್ಶಿಯಾಗಿ ಐಎಎಸ್ ಅಧಿಕಾರಿ ಸುಜಾತಾ ಸೌನಿಕ್ ಅವರು ಇಂದು (ಭಾನುವಾರ) ಅಧಿಕಾರ ವಹಿಸಿಕೊಂಡಿದ್ದಾರೆ.
ನಿತಿನ್ ಕರೀರ್ ಅವರು ಮುಖ್ಯ ಕಾರ್ಯದರ್ಶಿ ಹುದ್ದೆಯಿಂದ ನಿವೃತ್ತರಾಗಿದ್ದು, ಆ ಜಾಗಕ್ಕೆ ಸುಜಾತಾ ಅವರು ನೇಮಕಗೊಂಡಿದ್ದಾರೆ.1987ರ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿರುವ ಅವರು ಮುಂದಿನ ವರ್ಷ ಜೂನ್‌ವರೆಗೆ ಅಧಿಕಾರದಲ್ಲಿ ಇರಲಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ರಾಜ್ಯ ಸಚಿವಾಲಯ 'ಮಂತ್ರಾಲಯ'ದಲ್ಲಿ ಸೋಮವಾರ ಸಂಜೆ ನಡೆಯಲಿರುವ ಸಮಾರಂಭದಲ್ಲಿ ಕರೀರ್ ಅವರು ಸೌನಿಕ್ ಅವರಿಗೆ ಅಧಿಕಾರ ಹಸ್ತಾಂತರಿಸಲಿದ್ದಾರೆ ಎಂದು ವರದಿಯಾಗಿದೆ.