ಕಾಸರಗೋಡು: ರಾಜ್ಯದಲ್ಲಿ 2024-25ನೇ ಶೈಕ್ಷಣಿಕ ವರ್ಷದಿಂದ ಜಾರಿಗೆ ಬರಲಿರುವ ನಾಲ್ಕು ವರ್ಷಗಳ ಪದವಿ ಕಾರ್ಯಕ್ರಮಗಳ ಜಿಲ್ಲಾಮಟ್ಟದ ಉದ್ಘಾಟನೆ ಕಾಸರಗೋಡು ಸರ್ಕಾರಿ ಕಾಲೇಜು ಸಭಾಂಗಣದಲ್ಲಿ ಜರುಗಿತು.
ಜಿಲ್ಲಾಧಿಕಾರಿ ಕೆ.ಇನ್‍ಬಾಶೇಖರ್ ಸಮಾರಂಭ ಉದ್ಘಾಟಿಸಿದರು. ಕಾಲೇಜು ಪ್ರಾಂಶುಪಾಲ ಡಾ. ವಿ.ಎಸ್. ಅನಿಲ್‍ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ನಂತರ ವಿಕಲಚೇತನರಿಗಾಗಿ ಕಾಲೇಜಿನ ಗ್ರಂಥಾಲಯದಲ್ಲಿ 'ಕಿಬೋ' ಸಿದ್ಧಪಡಿಸಲಾಯಿತು ಕಾರ್ಯಕ್ರಮದ ಪೂರ್ವಭಾವಿಯಾಗಿ ವಿದ್ಯಾರ್ಥಿಗಳು, ಪೆÇೀಷಕರು ಮತ್ತು ಸಾರ್ವಜನಿಕರಿಗೆ ನಾಲ್ಕು ವರ್ಷಗಳ ಪದವಿ ಕಾರ್ಯಕ್ರಮಗಳ ಕುರಿತು ಜಾಗೃತಿ ಕಾರ್ಯಕ್ರಮ ಆಯೋಜಿಸಲಗಿತ್ತು. ಉಪ ಪ್ರಮಸುಪಾಲೆ ಪಿ.ವಿ ಮಿನಿ, ಡಾ. ಅಸಿಫ್ ಇಕ್ಬಲ್ ಕಾಕಶ್ಯೇರಿ, ಡಾ.ಪಿ.ಯು ಜಿಜೋ, ಪಿಟಿಎ ಉಪಾಧ್ಯಕ್ಷ ಎ.ಪ್ರೇಮ್‍ಜಿತ್ ಉಪಸ್ಥಿತರಿದ್ದರು. ಡಾ.ಎ.ವಿ ಪ್ರದೀಪ್ ಸ್ವಾಗತಿಸಿದರು. ಡಾ. ಸಿನಿ ಜೋಸ್ ವಂದಿಸಿದರು.
ರಾಜ್ಯಮಟ್ಟದಲ್ಲಿ ನಡೆದ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಪಿಣರಾಯಿ ಅವರು ಆನ್‍ಲೈನ್ ಮೂಲಕ ಉದ್ಘಾಟಿಸಿದರು. ಉನ್ನತ ಶಿಕ್ಷಣ ಮತ್ತು ಸಾಮಾಜಿಕ ನ್ಯಾಯ ಸಚಿವ ಡಾ.ಆರ್.ಬಿಂದು ಅವರ ಅಧ್ಯಕ್ಷತೆ ವಹಿಸಿದ್ದರು.