ರಾಯಪುರ, ಛತ್ತೀಸಗಢ: ಛತ್ತೀಸಗಢದ ದಾಂತೇವಾಡ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿ ನಡೆಸಿದ ಎನ್‌ಕೌಂಟರ್‌ಗೆ ನಕ್ಸಲ್ ಮಹಿಳೆಯೊಬ್ಬರು ಬಲಿಯಾಗಿದ್ದಾರೆ ಎಂದು ಪೊಲೀಸರು ಗುರುವಾರ ಹೇಳಿದ್ದಾರೆ.
ರಾಯಪುರ, ಛತ್ತೀಸಗಢ: ಛತ್ತೀಸಗಢದ ದಾಂತೇವಾಡ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿ ನಡೆಸಿದ ಎನ್‌ಕೌಂಟರ್‌ಗೆ ನಕ್ಸಲ್ ಮಹಿಳೆಯೊಬ್ಬರು ಬಲಿಯಾಗಿದ್ದಾರೆ ಎಂದು ಪೊಲೀಸರು ಗುರುವಾರ ಹೇಳಿದ್ದಾರೆ.
ಕಿರಂದೂಲ್ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ನಕ್ಸಲ್ ನಿಗ್ರಹ ದಳದ ಕಾರ್ಯಾಚರಣೆ ವೇಳೆ ಗುಂಡಿನ ಚಕಮಕಿ ನಡೆದಿದೆ.
'ಪುರಂಗೇಲ್ ಮತ್ತು ಇರಲ್ಗುಡೆಮ್ ಅರಣ್ಯ ಪ್ರದೇಶದಲ್ಲಿ ಕಾರ್ಯಾಚರಣೆಗೆ ತೆರಳಿದ್ದ ಸಿಬ್ಬಂದಿ, ನಕ್ಸಲರ ತಂಡವನ್ನು ಸುತ್ತುವರಿದಾಗ ಗುಂಡಿನ ಚಕಮಕಿ ನಡೆಯಿತು. ಆ ಬಳಿಕ ಸ್ಥಳದಲ್ಲಿ ಶೋಧ ನಡೆಸಿದಾಗ ನಕ್ಸಲ್ ಮಹಿಳೆಯ ಮೃತದೇಹ ಮತ್ತು ಶಸ್ತ್ರಾಸ್ತ್ರಗಳು ದೊರೆತವು' ಎಂದು ಪೊಲೀಸ್ ಅಧಿಕಾರಿ ಮಾಹಿತಿ ನೀಡಿದರು.
ಇದರೊಂದಿಗೆ ಈ ವರ್ಷ ಛತ್ತೀಸಗಢದ ವಿವಿಧೆಡೆ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಮೃತಪಟ್ಟ ನಕ್ಸಲರ ಸಂಖ್ಯೆ 140ಕ್ಕೆ ಏರಿಕೆಯಾಗಿದೆ.