HEALTH TIPS

ಜರ್ಮನಿಯಿಂದ ಕೇರಳಕ್ಕೆ ಅಮೀಬಿಕ್ ಎನ್ಸೆಫಾಲಿಟಿಸ್ ಔಷಧಿ

               ತಿರುವನಂತಪುರ: ಅಪಾಯಕಾರಿ ಅಮೀಬಿಕ್ ಎನ್ಸೆಫಾಲಿಟಿಸ್‌ಗೆ ಜೀವರಕ್ಷಕ ಔಷಧವಾದ ಮಿಲ್ಟಿಪೋಸಿನ್ ಅನ್ನು ಜರ್ಮನಿಯಿಂದ ಕೇರಳಕ್ಕೆ ತರಲಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಔಷಧ ಬ್ಯಾಚ್‌ಗಳನ್ನು ತರಿಸಲಾಗುವುದು.

               ಅಮೀಬಿಕ್ ಎನ್ಸೆಫಾಲಿಟಿಸ್ ಬಹಳ ಅಪರೂಪದ ಕಾಯಿಲೆಯಾಗಿದೆ. ಆರೋಗ್ಯ ಸಚಿವೆ ವೀಣಾ ಜಾರ್ಜ್ ಮಾತನಾಡಿ, ಈ ಕಾಯಿಲೆಗೆ ಯಾವುದೇ ನಿರ್ದಿಷ್ಟ ಔಷಧವಿಲ್ಲ ಎಂದು  ಹೇಳಿದರು. ಕೇರಳದಲ್ಲಿ ಅಮೀಬಿಕ್ ಎನ್ಸೆಫಾಲಿಟಿಸ್ ವರದಿಗಳ ನಡುವೆ ಔಷಧವನ್ನು ತರಿಸಲಾಗಿದೆ.

               ಈ ನಡುವೆ ರಾಜ್ಯದಲ್ಲಿ ಮತ್ತೆ ಅಮೀಬಿಕ್ ಎನ್ಸೆಫಾಲಿಟಿಸ್ ಸೋಂಕು ದೃಢಪಟ್ಟಿದೆ. ಕೋಝಿಕ್ಕೋಡ್‌ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಾಲ್ಕು ವರ್ಷದ ಮಗುವಿಗೆ ಕಾಯಿಲೆ ಇರುವುದು ದೃಢಪಟ್ಟಿದೆ. ಮಗುವಿನ ಆರೋಗ್ಯ ಸ್ಥಿತಿ ತೃಪ್ತಿಕರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries