HEALTH TIPS

ಸಚಿವೆ ವೀಣಾ ಜಾರ್ಜ್ ವಾಹನ ಸ್ಕೂಟರ್ ಗೆ ಡಿಕ್ಕಿ: ಸಚಿವರು ಹಾಗೂ ಬೈಕ್ ಸವಾರಗೆ ಗಾಯ

            ಲಪ್ಪುರಂ: ವಯನಾಡು ಜಿಲ್ಲೆಯಲ್ಲಿ ಸಂಭವಿಸಿರುವ ಸರಣಿ ಭೂಕುಸಿತ ಸ್ಥಳಕ್ಕೆ ತೆರಳುತ್ತಿದ್ದ ಆರೋಗ್ಯ ಸಚಿವೆ ವೀಣಾ ಜಾರ್ಜ್‌ ಅವರ ಕಾರು ಜಿಲ್ಲೆಯ ಮಂಜೇರಿ ಸಮೀಪ ಬುಧವಾರ (ಇಂದು) ಬೆಳಿಗ್ಗೆ ಅಪಘಾತಕ್ಕೀಡಾಗಿದೆ.

            ಜಾರ್ಜ್‌ ಅವರು ರಕ್ಷಣಾ ಕಾರ್ಯಾಚರಣೆ ಪರಿಶೀಲನೆಗೆ ತೆರಳುತ್ತಿದ್ದರು.

ಸಚಿವರ ಕಾರು ಬೆಳಿಗ್ಗೆ 7.10ರ ಸುಮಾರಿಗೆ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಸಚಿವರನ್ನು ಕೂಡಲೇ ಮಂಜೇರಿಯ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆತಂಕ ಪಡುವ ಅಗತ್ಯವಿಲ್ಲ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ ಎಂದು ‍ಪೊಲೀಸರು ತಿಳಿಸಿದ್ದಾರೆ.

ಸಾವಿನ ಸಂಖ್ಯೆ 143ಕ್ಕೆ
               ಸರಣಿ ಭೂಕುಸಿತದಿಂದ ಮೃತಪಟ್ಟವರ ಸಂಖ್ಯೆ ಮಂಗಳವಾರ ರಾತ್ರಿ ವೇಳೆಗೆ 143ಕ್ಕೆ ಏರಿಕೆಯಾಗಿದೆ. ಸಾಕಷ್ಟು ಮಂದಿ ನಾಪತ್ತೆಯಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಆತಂಕವಿದೆ.

ವಯನಾಡು ಜಿಲ್ಲಾ ಕೇಂದ್ರದಿಂದ 25 ಕಿ.ಮೀ. ದೂರದಲ್ಲಿರುವ ಮೆಪ್ಪಾಡಿ ಪಟ್ಟಣದ ಸಮೀಪದ ಚೂರಲ್ಮಲ ಮತ್ತು ಮುಂಡಕ್ಕೈ ಪ್ರದೇಶಗಳಲ್ಲಿ ಸಂಭವಿಸಿದ ಭೂಕುಸಿತದಿಂದ 130 ಜನರು ಗಾಯಗೊಂಡಿದ್ದಾರೆ.

          ಸಾಕಷ್ಟು ಜನರು ಅವಶೇಷಗಳ ಅಡಿ ಸಿಲುಕಿರುವ ಸಾಧ್ಯತೆ ಇದೆ. ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ಮಲಪ್ಪುರಂ ಜಿಲ್ಲೆಯ ಪೋಥುಕಲ್‌ನಲ್ಲಿ ಕೆಲವರ ಶವಗಳು ಪತ್ತೆಯಾಗಿವೆ. ಗುರುತು ಪತ್ತೆ ಕಾರ್ಯ ಇನ್ನಷ್ಟೇ ಆಗಬೇಕಿದೆ.

         ಸೇನೆ, ವಾಯುಪಡೆ, ನೌಕಾಪಡೆ, ಎನ್‌ಡಿಆರ್‌ಎಫ್‌ ಮತ್ತು ಎಸ್‌ಡಿಆರ್‌ಎಫ್‌ ಜಂಟಿಯಾಗಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ.

                ಮೆಪ್ಪಾಡಿಯಲ್ಲಿ 2019ರ ಆಗಸ್ಟ್‌ನಲ್ಲಿ ಸಂಭವಿಸಿದ ಭೂಕುಸಿತದ ವೇಳೆ 17 ಮಂದಿ ಮೃತಪಟ್ಟಿದ್ದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries