ನವದೆಹಲಿ: ಕೇಂದ್ರ ಲೋಕಸೇವಾ ಆಯೋಗದ (ಯುಪಿಎಸ್‌ಸಿ) ಅಧ್ಯಕ್ಷ ಮನೋಜ್ ಸೋನಿ ಅವರು ವೈಯಕ್ತಿಕ ಕಾರಣಗಳಿಂದ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ನವದೆಹಲಿ: ಕೇಂದ್ರ ಲೋಕಸೇವಾ ಆಯೋಗದ (ಯುಪಿಎಸ್‌ಸಿ) ಅಧ್ಯಕ್ಷ ಮನೋಜ್ ಸೋನಿ ಅವರು ವೈಯಕ್ತಿಕ ಕಾರಣಗಳಿಂದ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಐಎಎಸ್ ಪ್ರೊಬೇಷನರಿ ಅಧಿಕಾರಿ ಪೂಜಾ ಖೇಡ್ಕರ್ ನೇಮಕಾತಿ ಕುರಿತಾದ ವಿವಾದ ಹಾಗೂ ಆರೋಪಗಳಿಗೂ ಯಾವುದೇ ರೀತಿಯಲ್ಲಿ ಸಂಬಂಧವಿಲ್ಲ.
'ಮನೋಜ್ ಸೋನಿ ಅವರು ಹದಿನೈದು ದಿನಗಳ ಹಿಂದೆಯೇ ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ರಾಜೀನಾಮೆಯನ್ನು ಇನ್ನೂ ಅಂಗೀಕರಿಸಿಲ್ಲ' ಎಂದು ಕೇಂದ್ರದ ಸಿಬ್ಬಂದಿ ಮತ್ತು ತರಬೇತಿ ಇಲಾಖೆಯ (ಡಿಒಪಿಟಿ) ತಿಳಿಸಿದೆ.
ಖ್ಯಾತ ಶಿಕ್ಷಣ ತಜ್ಞರಾಗಿರುವ 59 ವರ್ಷದ ಮನೋಜ್ ಸೋನಿ ಅವರು 2017ರ ಜೂನ್ 28ರಂದು ಯುಪಿಎಸ್‌ಸಿ ಸದಸ್ಯರಾಗಿ ಅಧಿಕಾರ ವಹಿಸಿಕೊಂಡಿದ್ದರು. ಬಳಿಕ 2023ರ ಮೇ 16ರಂದು ಯುಪಿಎಸ್‌ಸಿ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಅವರು ಅಧಿಕಾರಾವಧಿಯು 2029ರ ಮೇ 15ರಂದು ಕೊನೆಗೊಳ್ಳುತ್ತಿತ್ತು.
ಯುಪಿಎಸ್‌ಸಿಯಲ್ಲಿ ನೇಮಕಗೊಳ್ಳುವ ಮೊದಲು, ಸೋನಿ ಮೂರು ಅವಧಿಗೆ ಉಪಕುಲಪತಿಯಾಗಿ ಸೇವೆ ಸಲ್ಲಿಸಿದ್ದರು.