ಪೆಶಾವರ: ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಟೈಂಕ್/ ಜಿಲ್ಲೆಯಲ್ಲಿ ಅರೆಸೇನಾ ಪಡೆಯ ಮೂವರು ಯೋಧರನ್ನು ಭಯೋತ್ಪಾದಕರು ಅಪಹರಿಸಿದ್ದಾರೆ ಎಂದು ಪೊಲೀಸರು ತಿಳಿಸಿದರು.
ಪೆಶಾವರ: ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಟೈಂಕ್/ ಜಿಲ್ಲೆಯಲ್ಲಿ ಅರೆಸೇನಾ ಪಡೆಯ ಮೂವರು ಯೋಧರನ್ನು ಭಯೋತ್ಪಾದಕರು ಅಪಹರಿಸಿದ್ದಾರೆ ಎಂದು ಪೊಲೀಸರು ತಿಳಿಸಿದರು.
ಯೋಧರು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಮಾರ್ಗ ಮಧ್ಯೆ ಕಾರನ್ನು ಅಡ್ಡಗಟ್ಟಿ ಅಪಹರಿಸಿದ್ದಾರೆ.
ಕಳೆದ ತಿಂಗಳು ತೆಹ್ರಿಕ್-ಎ-ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ) ಭಯೋತ್ಪಾದಕರು ಕನಿಷ್ಠ 13 ಕಾರ್ಮಿಕರನ್ನು ಅಪಹರಣ ಮಾಡಿದ್ದರು. ಇದಾದ ಕೆಲ ಗಂಟೆಗಳ ಒಳಗಾಗಿ ಕಾರ್ಯಾಚರಣೆ ನಡೆಸಿದ ಪೊಲೀಸರು ಒಂಬತ್ತು ಮಂದಿಯನ್ನು ರಕ್ಷಿಸಿದ್ದರು. ಇನ್ನೂ ನಾಲ್ವರು ಉಗ್ರರ ವಶದಲ್ಲಿದ್ದಾರೆ.