HEALTH TIPS

ಭಾರೀ ಮಳೆ: ಕಾಸರಗೋಡು ಸಹಿತ ವಿವಿಧ ಜಿಲ್ಲೆಗಳಲ್ಲಿ ಶಿಕ್ಷಣ ಸಂಸ್ಥೆಗಳಿಗೆ ಇಂದು ರಜೆ

              ತಿರುವನಂತಪುರಂ: ಉತ್ತರ ಕೇರಳದಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆಯ ಹಿನ್ನೆಲೆಯಲ್ಲಿ ಕಾಸರಗೋಡು, ಕಣ್ಣೂರು, ಕೋಯಿಕ್ಕೋಡ್, ಮಲಪ್ಪುರಂ ಮತ್ತು ತ್ರಿಶೂರ್ ಜಿಲ್ಲೆಗಳಲ್ಲಿ ಶಿಕ್ಷಣ ಸಂಸ್ಥೆಗಳಿಗೆ ಇಂದು ರಜೆ ಘೋಷಿಸಲಾಗಿದೆ.

              ಜಿಲ್ಲೆಯ ಅಂಗನವಾಡಿಗಳು, ವೃತ್ತಿಪರ ಕಾಲೇಜುಗಳು ಸೇರಿದಂತೆ ಶಿಕ್ಷಣ ಸಂಸ್ಥೆಗಳಿಗೆ ಜಿಲ್ಲಾಧಿಕಾರಿಗಳು ರಜೆ ಘೋಷಿಸಿದ್ದಾರೆ. ಈ ಹಿಂದೆ ನಿಗದಿಯಾಗಿದ್ದ ಸಾರ್ವಜನಿಕ ಪರೀಕ್ಷೆಗಳು ಮತ್ತು ವಿಶ್ವವಿದ್ಯಾಲಯದ ಪರೀಕ್ಷೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.

                 ಕಾಸರಗೋಡು ಜಿಲ್ಲೆಯಲ್ಲಿ ಕಾಲೇಜು ಹೊರತುಪಡಿಸಿ ಶಿಕ್ಷಣ ಸಂಸ್ಥೆಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ. ಜಿಲ್ಲೆಯ ರಾಜ್ಯ, ಸಿಬಿಎಸ್‍ಇ, ಐಸಿಎಸ್‍ಸಿ ಶಾಲೆಗಳು, ಕೇಂದ್ರೀಯ ವಿದ್ಯಾಲಯಗಳು, ಅಂಗನವಾಡಿಗಳು ಮತ್ತು ಮದರಸಾಗಳಂತಹ ಶಿಕ್ಷಣ ಸಂಸ್ಥೆಗಳಿಗೆ ರಜೆ ನೀಡಲಾಗಿದೆ. ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ನಷ್ಟವಾಗುವ ಅಧ್ಯಯನದ ಸಮಯವನ್ನು ಸರಿಹೊಂದಿಸಲು ಕ್ರಮಕೈಗೊಳ್ಳಬೇಕು ಮತ್ತು ಪೂರ್ವ ಘೋಷಿತ ಪರೀಕ್ಷೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಕೆ. ಇನ್ಭಾಶೇಖರ್ ಸ್ಪಷ್ಟಪಡಿಸಿದ್ದಾರೆ.

            ಕಳೆದ ಕೆಲವು ದಿನಗಳಿಂದ ಉತ್ತರ ಕೇರಳದಲ್ಲಿ  ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಗಳ ಭಾಗವಾಗಿ ರಜೆ ಘೋಷಿಸಲಾಗಿದ್ದು ಇಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ಮಲಪ್ಪುರಂ, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಎರ್ನಾಕುಳಂ, ತ್ರಿಶೂರ್, ಪಾಲಕ್ಕಾಡ್, ಕೋಝಿಕ್ಕೋಡ್ ಮತ್ತು ವಯನಾಡ್ ಜಿಲ್ಲೆಗಳಲ್ಲಿ ಸೋಮವಾರ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries