ಕಣ್ಣೂರು: ಪೋಲೀಸರು ಬ್ಲಾಕ್ ಮೇಲ್ ಮಾಡುತ್ತಿದ್ದಾರೆ ಎಂದು ದೂರಲಾಗಿದೆ. ಕಣ್ಣೂರಿನ ಸೇಂಟ್ ಏಂಜೆಲೋ ಕೋಟೆಯಲ್ಲಿ ಭದ್ರತಾ ಕರ್ತವ್ಯದಲ್ಲಿರುವ ಅಧಿಕಾರಿಯೊಬ್ಬರ ವಿರುದ್ಧ ಈ ಆರೋಪ ಮಾಡಲಾಗಿದೆ.
ಕೋಟೆಯ ವೀಕ್ಷಣೆಗೆ ಬಂದಿದ್ದ ಪ್ರೇಮಿಗಳ ಖಾಸಗಿ ದೃಶ್ಯಗಳನ್ನು ರೆಕಾರ್ಡ್ ಮಾಡಿ ಬೆದರಿಕೆ ಹಾಕಲಾಗಿದೆ. ಮುಳುಪಿಲಂಗಾಡ್ ಮೂಲದ ಪ್ರವೀಶ್ ವಿರುದ್ಧ ದೂರು ದಾಖಲಾಗಿದೆ. ಈ ಬಗ್ಗೆ ಕಣ್ಣೂರು-ಕೊಲ್ಲಂ ನಿವಾಸಿಗಳು ನಗರ ಪೋಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದ್ದಾರೆ. ಪ್ರವೀಶ್ ಇಡತಾನುಕುಳ ಪೆÇಲೀಸ್ ಸಂಘದ ಜಿಲ್ಲಾ ಜಂಟಿ ಕಾರ್ಯದರ್ಶಿಯೂ ಆಗಿದ್ದಾರೆ.
ದೂರಿನ ಪ್ರಕಾರ, ಚಿತ್ರೀಕರಿಸಿದ ದೃಶ್ಯಗಳನ್ನು ಬಿಡುಗಡೆ ಮಾಡದಂತೆ ಅಧಿಕಾರಿ ಹಣಕ್ಕೆ ಬೇಡಿಕೆಯಿಟ್ಟರು. ಸ್ಪೆಷಲ್ ಬ್ರಾಂಚ್ ಡಿವೈಎಸ್ಪಿ ಘಟನೆಯ ತನಿಖೆ ಆರಂಭಿಸಿದ್ದಾರೆ.