ತಿರುವನಂತಪುರಂ: ರಾಜ್ಯದಲ್ಲಿ ಮತ್ತೆ ಮುಂಗಾರು ಚುರುಕಾಗಿದ್ದು, ಪತ್ತನಂತಿಟ್ಟ, ಪಾಲಕ್ಕಾಡ್ ಮತ್ತು ವಯನಾಡ್, ಕಾಸರಗೋಡು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಕೇಂದ್ರ ಹವಾಮಾನ ಕೇಂದ್ರ ಮಾಹಿತಿ ನೀಡಿದೆ. ಉತ್ತರ ಕೇರಳದಲ್ಲಿ ಮಳೆಯಾಗಲಿದೆ.
ಕೋಝಿಕ್ಕೋಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ನಾಳೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ನಾಳೆ ರಾತ್ರಿ 11.30ರವರೆಗೆ ಕೇರಳ ಕರಾವಳಿ ಮತ್ತು ತಮಿಳುನಾಡು ಕರಾವಳಿಯಲ್ಲಿ ಅಲೆಗಳ ಅಬ್ಬರ ಹಾಗೂ ಸಮುದ್ರ ಪ್ರಕ್ಷುಬ್ಧವಾಗುವ ಸಾಧ್ಯತೆ ಇದೆ. ಈ ಪ್ರದೇಶಗಳಲ್ಲಿ ಮೀನುಗಾರರು ಮತ್ತು ಕರಾವಳಿ ನಿವಾಸಿಗಳು ವಿಶೇಷ ಎಚ್ಚರಿಕೆ ವಹಿಸಬೇಕು.