ಶ್ರೀನಗರ: ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರ ಕೆಲವೇ ತಿಂಗಳಲ್ಲಿ ಸಹಜ ಸ್ಥಿತಿಗೆ ಬರಲಿದೆ ಎಂದು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಬುಧವಾರ ಹೇಳಿದ್ದಾರೆ.
ಶ್ರೀನಗರ: ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರ ಕೆಲವೇ ತಿಂಗಳಲ್ಲಿ ಸಹಜ ಸ್ಥಿತಿಗೆ ಬರಲಿದೆ ಎಂದು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಬುಧವಾರ ಹೇಳಿದ್ದಾರೆ.
'ಇಲ್ಲಿನ ಶಾಂತಿಯುತ ವಾತಾವರಣವನ್ನು ಅರಗಿಸಿಕೊಳ್ಳಲು ಸಾಧ್ಯವಾಗದವರು ಅಂತ್ಯಕ್ಕೆ ಸಿದ್ದರಾಗಬೇಕು.
ಕಳೆದ ಕೆಲವು ತಿಂಗಳುಗಳಿಂದ ಕಣಿವೆ ರಾಜ್ಯದಲ್ಲಿ ಭದ್ರತಾ ಪಡೆ ಹಾಗೂ ಭಯೋತ್ಪಾದಕರ ನಡುವೆ ನಿರಂತರ ಗುಂಡಿನ ಚಕಮಕಿ ನಡೆಯುತ್ತಿದೆ. ಉಗ್ರರ ವಿರುದ್ಧದ ಕಾರ್ಯಾಚರಣೆ ಈಗಲೂ ಮುಂದುವರಿದಿದೆ.
ಏತನ್ಮಧ್ಯೆ ಕೇಂದ್ರ ಬಜೆಟ್ ಅನ್ನು ಮನೋಜ್ ಸಿನ್ಹಾ ಸ್ವಾಗತಿಸಿದ್ದು, 'ಸಂಸತ್ತಿನಲ್ಲಿ ಐತಿಹಾಸಿಕ ಬಜೆಟ್ ಮಂಡಿಸಲಾಗಿದೆ' ಎಂದು ಬಣ್ಣಿಸಿದ್ದಾರೆ.
'ಅಭಿವೃದ್ಧಿ ಹೊಂದಿದ ಭಾರತಕ್ಕೆ ಇದು ಭದ್ರ ಬುನಾದಿಯಾಗಲಿದೆ. ಇದರೊಂದಿಗೆ ಜಮ್ಮು ಮತ್ತು ಕಾಶ್ಮೀರದ ಅಭಿವೃದ್ಧಿಯೂ ಸಾಧ್ಯವಾಗಲಿದೆ' ಎಂದು ಹೇಳಿದ್ದಾರೆ.
'ಬಜೆಟ್ ರೈತರು, ಯುವ ಜನರು, ಮಹಿಳೆಯರು ಹಾಗೂ ಬಡವರ ಮೇಲೆ ಹೆಚ್ಚಿನ ಗಮನ ಹರಿಸಿದೆ. ಜಮ್ಮು ಮತ್ತು ಕಾಶ್ಮೀರದ ಸಮಗ್ರ ಅಭಿವೃದ್ಧಿಗೆ ಹಣಕಾಸಿನ ನೆರವು ಒದಗಿಸಲಾಗಿದೆ' ಎಂದು ಹೇಳಿದ್ದಾರೆ.