HEALTH TIPS

ಜಮ್ಮು ಮತ್ತು ಕಾಶ್ಮೀರ | ಎನ್‌ಕೌಂಟರ್: ಉಗ್ರನ ಹತ್ಯೆ, ಯೋಧ ಹುತಾತ್ಮ

         ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಮಂಗಳವಾರ ತಡರಾತ್ರಿ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ಯೋಧ ಹುತಾತ್ಮರಾಗಿದ್ದಾರೆ. ಈ ವೇಳೆ ಒಬ್ಬ ಉಗ್ರನನ್ನು ಸೇನೆ ಸದೆಬಡಿದಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

        ಕುಪ್ವಾರ ಜಿಲ್ಲೆಯ ಲೋಲಾಬ್ ಎಂಬಲ್ಲಿ ಕೆಲವು ದಿನಗಳಿಂದ ಉಗ್ರರ ಚಟುವಟಿಕೆಗಳು ನಡೆಯುತ್ತಿರಬಹುದು ಎಂಬ ಮಾಹಿತಿ ಮೇರೆಗೆ ಈ ಭಾಗದಲ್ಲಿ ಸೇನೆ ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆ ಕೈಗೊಂಡಿದ್ದರು.

         ಉಗ್ರರು ಅಡಗಿರುವ ಸ್ಥಳವನ್ನು ಪತ್ತೆಹಚ್ಚಿದ ಸೇನೆ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು, ಸೇನೆಯು ಪ್ರತಿದಾಳಿ ನಡೆಸಿತು.

              ಈ ಘಟನೆಯಲ್ಲಿ ಒಬ್ಬ ಉಗ್ರನನ್ನು ಹತ್ಯೆ ಮಾಡಲಾಯಿತು. ಆದರೆ, ಗಾಯಗೊಂಡಿದ್ದ ಸೇನಾ ಯೋಧ ಬಳಿಕ ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries