ತಿರುವನಂತಪುರ: ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ನಿನ್ನೆ, ಸೋಮವಾರದಿಂದ ಮತ್ತೆ ಆರಂಭಗೊAಡ ಭಾರಿ ಮಳೆ ಆಗಸ್ಟ್ ೧ ರವರೆಗೆ ಮುಂದುವರಿಯುವ ಸಾಧ್ಯತೆಯಿದೆ. ರಾಜ್ಯದಲ್ಲಿ ನಿನ್ನೆ ಮಲಪ್ಪುರಂ, ಕೋಯಿಕ್ಕೋಡ್, ವಯನಾಡು, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿತ್ತು. ಅಲ್ಲಲ್ಲಿ ಭಾರೀ ಮಳೆಯಾಗಿತ್ತು. ಇಡುಕ್ಕಿ, ಎರ್ನಾಕುಳಂ, ತ್ರಿಶೂರ್, ಮಲಪ್ಪುರಂ, ಕೋಯಿಕ್ಕೋಡ್, ವಯನಾಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಇಂದು (ಮಂಗಳವಾರ)ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ.
ಚಂಡಮಾರುತದ ಅಬ್ಬರವು ಕರಾವಳಿಗಳಲ್ಲಿ ಪ್ರಬಲವಾಗಿರುವ ಸಾಧ್ಯತೆಯಿರುವುದರಿಂದ ಅಪಾಯದ ವಲಯಗಳಲ್ಲಿ ವಾಸಿಸುವ ಜನರು ಜಾಗರೂಕರಾಗಿರಬೇಕು. ಉತ್ತರ ಕೇರಳ-ಲಕ್ಷದ್ವೀಪ ಕರಾವಳಿಯಲ್ಲಿ ಮೀನುಗಾರಿಕೆ ನಡೆಸಬಾರದು ಹಾಗೂ ಇಂದು ಮತ್ತು ನಾಳೆ ಕರ್ನಾಟಕ ಕರಾವಳಿಯಲ್ಲಿ ಮೀನುಗಾರಿಕೆ ನಡೆಸಬಾರದು ಎಂದು ಸೋಮವಾರ ಕೇಂದ್ರ ಹವಾಮಾನ ಇಲಾಖೆ ತಿಳಿಸಿದೆ.