ಕಾಸರಗೋಡು: ಮಕ್ಕಳಿಗೆ ಒಲಿಂಪಿಕ್ಸ್ ಸಂದೇಶ ಸಾರುವ ನಿಟ್ಟಿನಲ್ಲಿ ಕಾಸರಗೋಡು ಬಾರ ಸರ್ಕಾರಿ ಪ್ರೌಢಶಾಲೆಯಲ್ಲಿ ವಿಶೇಷ ಸಭೆ ಆಯೋಜಿಸಲಾಯಿತು. ಕಾಞಂಗಾಡು ಬ್ಲಾಕ್ ಪಂಚಾಯತ್ ಅಧ್ಯಕ್ಷ ಕೆ. ಮಣಿಕಂಠನ್ ಕ್ರೀಡಾಜ್ಯೋತಿ ಬೆಳಗಿ, ಜ್ಯೋತಿಯನ್ನು ಕ್ರೀಡಾಪಟುಗಳಿಗೆ ಹಸ್ತಾಂತರಿಸಿದರು. ವಿದ್ಯಾರ್ಥಿ ಪ್ರತಿನಿಧಿ ಅತಿಥಿರಾಜೇಶ್ ಮಕ್ಕಳಿಗೆ ಒಲಿಂಪಿಕ್ ಸಂದೇಶ ಬೋಧಿಸಿದರು. ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಎಂ.ಕೆ.ವಿಜಯನ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯಶಿಕ್ಷಕ ಕೆ. ಶಂಕರನ್ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಟಿ. ಸತೀಶ ವಂದಿಸಿದರು.