ಪ್ರತಾಪಗಢ: ಪರ ಪುರುಷನೊಂದಿಗೆ ಅಕ್ರಮ ಸಂಬಂಧ ಇರಿಸಿಕೊಂಡ ಆರೋಪದಡಿ ಗ್ರಾಮ ಪಂಚಾಯ್ತಿ ನಡೆಸಿದ ಕಾಂಗರೂ ನ್ಯಾಯಾಲಯದ ಆದೇಶದಂತೆ ಮಹಿಳೆಯೊಬ್ಬರ ತಲೆ ಬೋಳಿಸಿ, ಮುಖಕ್ಕೆ ಮಸಿ ಬಳಿದು, ಮರ ಕಟ್ಟಿ ಹಾಕಿದ ಘಟನೆ ಉತ್ತರ ಪ್ರದೇಶದ ಚೋಟ್ಕಿ ಇಬ್ರಾಹ್ಮಿಪುರ ಗ್ರಾಮದಲ್ಲಿ ನಡೆದಿದೆ.

ಈ ಸಂಬಂಧ 20 ಜನರ ವಿರುದ್ಧ ಪ್ರಕರಣ ದಾಖಲಾಗಿದ್ದು 15 ಜನರನ್ನು ಪೊಲೀಸರು ಬಂಧಿಸಿದ್ದಾರೆ.
ಮಹಿಳೆಯ ಪತಿ ಮುಂಬೈನಲ್ಲಿ ವಾಸವಿದ್ದು, ಅಕ್ರಮ ಸಂಬಂಧದ ವಿಚಾರ ತಿಳಿದು ಊರಿಗೆ ಮರಳಿದ್ದಾರೆ. ದಂಪತಿಗೆ ಮೂವರು ಮಕ್ಕಳಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಭಾನುವಾರ ಈ ವಿಚಾರವಾಗಿ ಗ್ರಾಮದಲ್ಲಿ ಪಂಚಾಯ್ತಿ ಕರೆಯಲಾಗಿತ್ತು. ಈ ವೇಳೆ ಮಹಿಳೆಯ ತಲೆ ಬೋಳಿಸಿ, ಮುಖಕ್ಕೆ ಮಸಿ ಬಳಿದು, ಮರಕ್ಕೆ ಕಟ್ಟಿ ಹಾಕಿದ್ದಾರೆ. ಈ ವೇಳೆ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ವ್ಯಕ್ತಿ ಆಕೆಯನ್ನು ರಕ್ಷಿಸಲು ಮುಂದಾಗಿದ್ದು, ಆತನನ್ನೂ ಗ್ರಾಮಸ್ಥರು ಥಳಿಸಿದ್ದಾರೆ ಎಂದು ಸ್ಥಳೀಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಮಹಿಳೆಯನ್ನು ರಕ್ಷಿಸಿ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ. ನಾಪತ್ತೆಯಾದ ಐವರಿಗಾಗಿ ಬಲೆಬೀಸಲಾಗಿದೆ ಎಂದೂ ಅವರು ಹೇಳಿದ್ದಾರೆ.