ನಾರಾಯಣಪುರ: ಛತ್ತೀಸಗಢದ ನಾರಾಯಣಪುರ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿ ಹಾಗೂ ನಕ್ಸಲರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಐವರು ನಕ್ಸಲರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ನಾರಾಯಣಪುರ: ಛತ್ತೀಸಗಢದ ನಾರಾಯಣಪುರ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿ ಹಾಗೂ ನಕ್ಸಲರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಐವರು ನಕ್ಸಲರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಬುಜ್ಮದ್‌ನ ಕೊಹ್ಕಮೇಟಾ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯದಲ್ಲಿ ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಎನ್‌ಕೌಂಟರ್‌ನಲ್ಲಿ ಇದುವರೆಗೆ ಐವರು ನಕ್ಸಲರು ಹತರಾಗಿದ್ದಾರೆ. ಭದ್ರತಾ ಸಿಬ್ಬಂದಿ ಸುರಕ್ಷಿತವಾಗಿದ್ದು, ಘಟನಾ ಸ್ಥಳದಲ್ಲಿ ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ಅವರು ಹೇಳಿದ್ದಾರೆ.
ಛತ್ತೀಸಗಢದಲ್ಲಿ ಈ ವರ್ಷ ನಡೆದ ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ 138 ನಕ್ಸಲರು ಮೃತಪಟ್ಟಿದ್ದಾರೆ. ನಾರಾಯಣಪುರ ಸೇರಿದಂತೆ ಏಳು ಜಿಲ್ಲೆಗಳನ್ನು ಒಳಗೊಂಡಿರುವ ಬಸ್ತಾರ್ ಪ್ರಾಂತ್ಯದಲ್ಲಿ 136 ನಕ್ಸಲರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ರಾಯಪುರ, ಧಮ್ತಾರಿ ಜಿಲ್ಲೆಯಲ್ಲಿ ಇಬ್ಬರು ನಕ್ಸಲರು ಹತರಾಗಿದ್ದಾರೆ.
ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯಲ್ಲಿ ಜೂನ್ 15ರಂದು ನಡೆದ ಎನ್‌ಕೌಂಟರ್‌ನಲ್ಲಿ ಎಂಟು ನಕ್ಸಲರ ಹತ್ಯೆ ಮಾಡಲಾಗಿತ್ತು. ವಿಶೇಷ ಕಾರ್ಯಪಡೆಯ (ಎಸ್‌ಟಿಎಫ್) ಒಬ್ಬ ಸಿಬ್ಬಂದಿ ಹುತಾತ್ಮರಾಗಿದ್ದು, ಇಬ್ಬರು ಗಾಯಗೊಂಡಿದ್ದರು.