ವಾಷಿಂಗ್ಟನ್: ಅಮೆರಿಕದ 2020ರ ಅಧ್ಯಕ್ಷೀಯ ಚುನಾವಣೆಯ ಫಲಿತಾಂಶವನ್ನು ತಿರುಚುವ ಯತ್ನಕ್ಕೆ ಸಂಬಂಧಿಸಿದಂತೆ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧದ ಕ್ರಿಮಿನಲ್ ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ಮತ್ತೆ ಮುಂದೂಡಿದೆ.
ವಾಷಿಂಗ್ಟನ್: ಅಮೆರಿಕದ 2020ರ ಅಧ್ಯಕ್ಷೀಯ ಚುನಾವಣೆಯ ಫಲಿತಾಂಶವನ್ನು ತಿರುಚುವ ಯತ್ನಕ್ಕೆ ಸಂಬಂಧಿಸಿದಂತೆ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧದ ಕ್ರಿಮಿನಲ್ ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ಮತ್ತೆ ಮುಂದೂಡಿದೆ.
ಇದರಿಂದಾಗಿ ನವೆಂಬರ್‌ನಲ್ಲಿ ನಡೆಯುವ ಅಧ್ಯಕ್ಷೀಯ ಚುನಾವಣೆಗೆ ಮುನ್ನ ಪ್ರಕರಣ ವಿಚಾರಣೆ ಪೂರ್ಣಗೊಳ್ಳುವ ಸಾಧ್ಯತೆ ಕ್ಷೀಣವಾಗಿದೆ.
6-3 ಮತಗಳಿಂದ ತೀರ್ಪು ನೀಡಿರುವ ನ್ಯಾಯಮೂರ್ತಿಗಳು, ಇದೇ ಮೊದಲ ಬಾರಿಗೆ, ಮಾಜಿ ಅಧ್ಯಕ್ಷರು ತಮ್ಮ ಅಧಿಕೃತ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಶಿಕ್ಷೆಯಿಂದ ವಿನಾಯಿತಿ ಪಡೆಯಬಹುದು. ಆದರೆ, ಅನಧಿಕೃತ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಯಾವುದೇ ವಿನಾಯಿತಿ ಇರುವುದಿಲ್ಲ ಎಂದು ಹೇಳಿದರು.
ಕೆಳಹಂತದ ನ್ಯಾಯಾಲಯಗಳು ಟ್ರಂಪ್ ಅವರ ಪ್ರಕರಣದಲ್ಲಿ ನಿರ್ಧಾರಗಳನ್ನು ಹೇಗೆ ಅನ್ವಯಿಸಬೇಕು ಎಂಬುದನ್ನು ತೀರ್ಮಾನಿಸಬೇಕು ಎಂದು ನ್ಯಾಯಮೂರ್ತಿಗಳು ಆದೇಶಿಸಿದರು.
ಇದರಿಂದಾಗಿ ವಿಶೇಷ ವಕೀಲ ಜಾಕ್ ಸ್ಮಿತ್ ವಾದ ಮಂಡಿಸುತ್ತಿರುವ ಪ್ರಕಣದಲ್ಲಿ ಟ್ರಂಪ್ ವಿಚಾರಣೆ ಎದುರಿಸುವುದು ವಿಳಂಬವಾಗಬಹುದು ಎನ್ನಲಾಗಿದೆ.