ಮಂಜೇಶ್ವರ, ಜು.2: ಎರಡು ಕಾರುಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಓರ್ವ ಮೃತಪಟ್ಟು, ಮೂವರು ಗಾಯಗೊಂಡ ಘಟನೆ ಮಂಜೇಶ್ವರ ಸಮೀಪದ ವರ್ಕಾಡಿ ಮೊರತ್ತಣೆ ಎಂಬಲ್ಲಿ ಸೋಮವಾರ ತಡರಾತ್ರಿ ನಡೆದಿದೆ.
ಮಂಜೇಶ್ವರ, ಜು.2: ಎರಡು ಕಾರುಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಓರ್ವ ಮೃತಪಟ್ಟು, ಮೂವರು ಗಾಯಗೊಂಡ ಘಟನೆ ಮಂಜೇಶ್ವರ ಸಮೀಪದ ವರ್ಕಾಡಿ ಮೊರತ್ತಣೆ ಎಂಬಲ್ಲಿ ಸೋಮವಾರ ತಡರಾತ್ರಿ ನಡೆದಿದೆ.
ಮೀ೦ಜ ತಲೆಕ್ಕಳ ಡಾ.ಅಬೂಬಕರ್ ಮುಸ್ಲಿಯಾರ್(65) ಮೃತಪಟ್ಟವರು. ಮೃತರ ಪತ್ನಿ ಅಮೀನಾ, ಪುತ್ರಿ ಸಬೀರಾ ಮತ್ತು ಸುಮಯ್ಯ ಗಾಯಗೊಂಡಿದ್ದಾರೆ.
ಕಳೆದ ರಾತ್ರಿ 11 ಗಂಟೆ ಸುಮಾರಿಗೆ ಮೊರತ್ತಣೆ ಜಂಕ್ಷನ್ ನಲ್ಲಿ ಈ ಅಪಘಾತ ಸಂಭವಿಸಿದೆ. ಅಬೂಬಕರ್ ಮುಸ್ಲಿಯಾರ್ ಸಂಚರಿಸುತ್ತಿದ್ದ ಆಲ್ಟೋ ಕಾರು ಮತ್ತು ಹೊಸಂಗಡಿ ಕಡೆಗೆ ತೆರಳುತ್ತಿದ್ದ ಇನ್ನೋವಾ ಕಾರು ನಡುವೆ ಢಿಕ್ಕಿಯಾಗಿವೆ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅಬೂಬಕರ್ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಅವರು ಕೊನೆಯುಸಿರೆಳದಿದ್ದಾರೆ ಎಂದು ತಿಳಿದುಬಂದಿದೆ.
ಉಳಿದ ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪಾವೂರಿನಲ್ಲಿ ಸಂಬಂಧಿಕರ ಮನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮರಳುತ್ತಿದ್ದಾಗ ಈ ಅಪಘಾತ ನಡೆದಿದೆ.
ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.