ಕಾಸರಗೋಡು: ರಾಷ್ಟ್ರೀಯ ಹೆದ್ದಾರಿ ಚೆರ್ಕಳದಿಂದ ಚಟ್ಟಂಚಾಲ್ ವರೆಗಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ರಾತ್ರಿಯಿಂದ ಜು. ೩೧ರ ಬೆಳಗ್ಗೆ ೭ರ ವರೆಗೆ ವಾಹನಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಕೆ. ಇನ್ಬಾಶೇಖರ್ ಆದೇಶ ಹೊರಡಿಸಿದ್ದಾರೆ. ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಷಟ್ಪಥ ಕಾಮಗಾರಿ ನಡೆಯುತ್ತಿರುವ ಈ ಪ್ರದೇಶದಲ್ಲಿ ಭೂಕುಸಿತಕ್ಕೆ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಈ ಮಧ್ಯೆ ವಯನಾಡಿನಲ್ಲಿ ಭಾರೀ ಭೂಕುಸಿತದಿಂದ ಕೂಡಿದ ಪ್ರವಾಹದಲ್ಲಿ ಜೀವತೆತ್ತವರ ಶೋಕಾರ್ಥ ಕೇರಳದಲ್ಲಿ ಜು. ೩೧ರ ವರೆಗೆ ಶೋಕಾಚರಣೆ ಘೋಷಿಸಲಾಗಿದೆ.