HEALTH TIPS

ತನಿಖಾ ಸಂಸ್ಥೆಗಳ ದುರ್ಬಳಕೆ ಖಂಡಿಸಿ ಸಂಸತ್ ಆವರಣದಲ್ಲಿ 'ಇಂಡಿಯಾ' ಪ್ರತಿಭಟನೆ

            ವದೆಹಲಿ: 'ವಿರೋಧ ಪಕ್ಷಗಳ ನಾಯಕರನ್ನು ಗುರಿಯಾಗಿಸಿ ಕೇಂದ್ರ ಸರ್ಕಾರವು ತನಿಖಾ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ' ಎಂದು ಆರೋಪಿಸಿ 'ಇಂಡಿಯಾ' ಮೈತ್ರಿಕೂಟದ ಸಂಸದರು ಸಂಸತ್ತಿನ ಆವರಣದಲ್ಲಿರುವ ಮಕರ ದ್ವಾರದ ಮೆಟ್ಟಿಲುಗಳ ಮೇಲೆ ಸೋಮವಾರ ಪ್ರತಿಭಟನೆ ನಡೆಸಿದರು.

         'ವಿರೋಧ ಪಕ್ಷದ ನಾಯಕರನ್ನು ಸುಮ್ಮನಿರಿಸಲು ತನಿಖಾ ಸಂಸ್ಥೆಗಳ ದುರುಪಯೋಗ ಮಾಡಿಕೊಳ್ಳುವುದನ್ನು ನಿಲ್ಲಿಸಿ', 'ಬಿಜೆಪಿಯನ್ನು ಸೇರಿಕೊಳ್ಳಿ, ಭ್ರಷ್ಟಾಚಾರ ಎಸಗಲು ಪರವಾನಗಿ ಪಡೆಯಿರಿ' ಎಂಬ ಬರಹಗಳಿರುವ ಫಲಕಗಳನ್ನು ನಾಯಕರು ಹಿಡಿದುಕೊಂಡಿದ್ದರು. ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರು ಸರಳುಗಳ ಹಿಂದಿರುವ ಪೋಸ್ಟರ್‌ ಅನ್ನು ಎಎಪಿ ಸಂಸದ ರಾಘವ್‌ ಚಡ್ಡಾ ಹಿಡಿದುಕೊಂಡಿದ್ದರು.

               ಬಂಧನದಲ್ಲಿರುವ ಪಶ್ಚಿಮ ಬಂಗಾಳದ ಮೂವರು ಸಚಿವರನ್ನು ಬಿಡುಗಡೆಗೊಳಿಸಿ, 'ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌ ಹಾಗೂ ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಹೇಮಂತ ಸೊರೇನ್‌ ಅವರ ವಿರುದ್ಧ ಜಾರಿ ನಿರ್ದೇಶನಾಲಯವನ್ನು ದುರ್ಬಳಕೆ ಮಾಡಿಕೊಳ್ಳುವುದನ್ನು ನಿಲ್ಲಿಸಿ' ಎಂದು ನಾಯಕರು ಘೋಷಣೆಗಳನ್ನು ಕೂಗಿದರು. ಕೇಜ್ರಿವಾಲ್‌ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಕೆಲವು ದಿನಗಳ ಹಿಂದೆ ಜುಲೈ 12ರವರೆಗೆ ವಿಸ್ತರಿಸಲಾಗಿತ್ತು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries