ಮಧೂರು: ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನ ಸಂಯೋಜನೆಯಲ್ಲಿ ಸಿರಿಬಾಗಿಲು ಸಾಂಸ್ಕೃತಿಕ ಭವನದಲ್ಲಿ ಸಾಂಸ್ಕøತಿಕ ಉತ್ಸವದ ಎರಡನೇ ದಿನ ನಿನ್ನೆ ವೈವಿಧ್ಯಮಯವಾಗಿ ಕಾರ್ಯಕ್ರಮ ಯಶಸ್ವಿಯಾಯಿತು.
ಪಾರ್ತಿಸುಬ್ಬನ ಜನ್ಮನಾಡು ಕುಂಬ್ಳೆ ಸೀಮೆಯ ಗಡಿನಾಡು ಕಾಸರಗೋಡಿನ ಸಿರಿಬಾಗಿಲಿನಲ್ಲಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಯಕ್ಷಗಾನ ಕಲಾಪೋಷಕರುಗಳ ಸಹಕಾರದಲ್ಲಿ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನ ಸಂಯೋಜನೆಯಲ್ಲಿ ಸಿರಿಬಾಗಿಲು ಸಾಂಸ್ಕೃತಿಕ ಭವನದಲ್ಲಿ ನಿನ್ನೆ 7 ತಂಡಗಳ ಪ್ರದರ್ಶನ ನಡೆಯಿತು. ಯಕ್ಷಗಾನ ಕ್ಷೇತ್ರದಲ್ಲಿ ಇದೊಂದು ಹಬ್ಬದ ವಾತಾವರಣ ಸೃಷ್ಟಿಸಿತು.
ವಿಶೇಷವೆಂಬಂತೆ ದೂರದ ಮಂಡ್ಯದ ಸುಲ್ತಾನ್ ಗೌಡ, ಶಣ್ಮುಖನ್ ಮುಂತಾದ ಪ್ರೇಕ್ಷಕರು ಭಾಗವಹಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಇಂದು ಶುದ್ಧ ಕನ್ನಡ ಉಳಿದಿದ್ದರೆ ಅದು ಯಕ್ಷಗಾನದಲ್ಲಿ ಮಾತ್ರ ಎಂಬ ಅನಿಸಿಕೆ ವ್ಯಕ್ತಪಡಿಸಿದರು.