ಕುಂಬಳೆ: ಕನ್ನಡ ಭಾಷೆ, ಸಂಸ್ಕøತಿಗಳಿಗೆ ಅಮೂಲ್ಯ ಕೊಡುಗೆ ನೀಡಿದ ಹಿರಿಯ ಸಾಧಕರನ್ನು ಅವರ ಮನೆಯಂಗಳದಲ್ಲಿ ಗೌರವಿಸುವ,ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ 'ಸಾಹಿತ್ಯ ಪರಿಷತ್ತಿನ ನಡಿಗೆ ಹಿರಿಯ ಸಾಧಕರ ಕಡೆಗೆ' ಎಂಬ ಕಾರ್ಯಕ್ರಮದಂಗವಾಗಿ ಹಿರಿಯ ಕನ್ನಡ ಧುರೀಣ,ನಿವೃತ್ತ ಮುಖ್ಯೋಪಾಧ್ಯಾಯ ಕೆ.ನಾರಾಯಣ ಗಟ್ಟಿ ಮಾಸ್ಟರ್ ಅವರನ್ನು ಕುಂಬಳೆ ಸಮೀಪದ ಮಳಿಯಲ್ಲಿರುವ ಅವರ ನಿವಾಸದಲ್ಲಿ ಅಭಿನಂದಿಸಲಾಯಿತು.
ಕನ್ನಡ ಸಾಹಿತ್ಯಪರಿಷತ್ತು ಕೇರಳ ಗಡಿನಾಡ ಘಟಕದ ಅಧ್ಯಕ್ಷ ಡಾ.ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ ಅವರು ನಾರಾಯಣ ಗಟ್ಟಿಯವರನ್ನು ಶಾಲುಹೊದಿಸಿ, ಫಲಪುಷ್ಪ, ಸ್ಮರಣಿಕೆಗಳನ್ನು ನೀಡಿ ಅಭಿನಂದಿಸಿದರು. ಪತ್ರಕರ್ತ ಎಂ.ನಾ ಚಂಬಲ್ತಿಮಾರ್ ಅಭಿನಂದನಾ ಭಾಷಣ ಮಾಡಿದರು. ಕಥೆಗಾರ್ತಿ ಸ್ನೇಹಲತಾ ದಿವಾಕರ, ಕವಯತ್ರಿ ದಿವ್ಯಾಗಟ್ಟಿ ಪರಕ್ಕಿಲ,ಸಂಘಟನಾ ಕಾರ್ಯದರ್ಶಿ ರಾಮಚಂದ್ರ ಭಟ್ ಧರ್ಮತ್ತಡ್ಕ ಉಪಸ್ಥಿತರಿದ್ದರು.
ಸನ್ಮಾನಕ್ಕೆ ಕೃತಜ್ಞತೆ ಸಲ್ಲಿಸಿ ಮಾತನಾಡಿದ ನಾರಾಯಣ ಗಟ್ಟಿ ಮತನಾಡಿದರು. ಸಾಹಿತ್ಯ ಪರಿಷತ್ತಿನ ಸಂಘಟನಾ ಕಾರ್ಯದರ್ಶಿ ವಿಶಾಲಾಕ್ಷ ಪುತ್ರಕಳ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಗೌರವ ಕಾರ್ಯದರ್ಶಿ ಶೇಖರ ಶೆಟ್ಟಿ ಬಾಯಾರು ವಂದಿಸಿದರು.