ಮಂಜೇಶ್ವರ: ಮಹಾಕವಿ ಮಂಜೇಶ್ವರ ಗೋವಿಂದ ಪೈ ಸ್ಮಾರಕ ಗ್ರಂಥಾಲಯ ಮಂಜೇಶ್ವರ ನೇತೃತ್ವದಲ್ಲಿ ಬೆಂಗಳೂರಿನ ಕನ್ನಡ ಅಭಿವೃದ್ದಿ ಪ್ರಾಧಿಕಾರದ ಸಹಯೋಗದೊಂದಿಗೆ ಮಂಜೇಶ್ವರ ಗಿಳಿವಿಂಡುವಿನಲ್ಲಿ ಇಂದು(ಜು.೨೮) ಕೆ.ಟಿ. ಗಟ್ಟಿ-ಬದುಕು-ಬರಹ ವಿಚಾರಗೋಷ್ಠಿ ಬೆಳಿಗ್ಗೆ ೧೦.೩೦ ಕ್ಕೆ ನಡೆಯಲಿದೆ.
ಗ್ರಂಥಾಲಯ ಸಮಿತಿ ಅಧ್ಯಕ್ಷ ಎಂ.ಉಮೇಶ್ ಸಾಲ್ಯಾನ್ ಕಾಸರಗೋಡು ಅಧ್ಯಕ್ಷತೆ ವಹಿಸುವರು. ಮಂಜೇಶ್ವರ ಗ್ರಾ.ಪಂ.ಅಧ್ಯಕ್ಷೆ ಜೀನ್ ಲವೀನಾ ಮೊಂತೇರೊ ಉದ್ಘಾಟಿಸುವರು. ಕಾಸರಗೋಡು ಸರ್ಕಾರಿ ಕಾಲೇಜಿನ ಪ್ರಾಧ್ಯಾಪಕ ಡಾ.ರತ್ನಾಕರ ಮಲ್ಲಮೂಲೆ ಅವರು ವಿಷಯ ಮಂಡನೆ ನಡೆಸುವರು. ಬಾಲಕೃಷ್ಣ ಮಾಸ್ತರ್, ಜಯಂತ ಮಾಸ್ತರ್ ಮೊದಲಾದವರು ಉಪಸ್ಥಿತರಿರುವರು.