HEALTH TIPS

ಲೋಕಸಭೆ ಸದಸ್ಯರಾಗಿ ಶತ್ರುಘ್ನ ಸಿನ್ಹಾ ಪ್ರಮಾಣ ವಚನ ಸ್ವೀಕಾರ

 ವದೆಹಲಿ: ಲೋಕಸಭೆ ಸದಸ್ಯರಾಗಿ ಇಂದು(ಸೋಮವಾರ) ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ನಟ ಹಾಗೂ ಸಂಸದ ಶತ್ರುಘ್ನ ಸಿನ್ಹಾ ಅವರು ಪ್ರಮಾಣ ವಚನ ಸ್ವೀಕರಿಸಿದರು.

ಪಶ್ಚಿಮ ಬಂಗಾಳದ ಅಸನ್ಸೋಲ್ ಕ್ಷೇತ್ರದಿಂದ ಸ್ಪರ್ಧಿಸಿದ್ದ ಸಿನ್ಹಾ ಗೆಲುವು ಸಾಧಿಸಿದ್ದಾರೆ.

ಜೂನ್‌ನಲ್ಲಿ ನಡೆದ ಮೊದಲ ಅಧಿವೇಶನದಲ್ಲಿ ಸಿನ್ಹಾ ಅವರು ಕಾರಣಾಂತರಗಳಿಂದ ಲೋಕಸಭೇ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಲು ಸಾಧ್ಯವಾಗಲಿಲ್ಲ. ಹೀಗಾಗಿ ಇಂದು ಸಂಸತ್ತಿನಲ್ಲಿ ದೇವರ ಹೆಸರಿನಲ್ಲಿ ಲೋಕಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಲೋಕಸಭೆಯು 543 ಸದಸ್ಯರ ಬಲ ಹೊಂದಿದ್ದು, 542 ಸದಸ್ಯರು ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದ ರಾಯ್‌ಬರೇಲಿ ಹಾಗೂ ಕೇರಳದ ವಯನಾಡು ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದರು. ಆದರೆ ರಾಯ್‌ಬರೇಲಿ ಮೂಲಕ ಸಂಸತ್‌ನ್ನು ಪ್ರತಿನಿಧಿಸುವುದಾಗಿ ಹೇಳಿದ್ದ ರಾಹುಲ್‌, ವಯನಾಡು ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries