HEALTH TIPS

ನೀಟ್-ಯುಜಿ ಅಕ್ರಮ: ಮತ್ತಿಬ್ಬರನ್ನು ಬಂಧಿಸಿದ ಸಿಬಿಐ

           ವದೆಹಲಿ: ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್‌-ಯುಜಿ ಪರೀಕ್ಷೆಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಓರ್ವ ಅಭ್ಯರ್ಥಿ ಸೇರಿದಂತೆ ಇಬ್ಬರನ್ನು ಪಟ್ನಾದಲ್ಲಿ ಸಿಬಿಐ ಬಂಧಿಸಿದೆ. ಈ ಮೂಲಕ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

          ನಳಂದ ಮೂಲದ ನೀಟ್‌-ಯುಜಿ ಅಭ್ಯರ್ಥಿ ಸನ್ನಿ ಮತ್ತು ಮತ್ತೊಬ್ಬ ಅಭ್ಯರ್ಥಿ ಗಯಾದ ರಂಜಿತ್ ಕುಮಾರ್‌ ಅವರ ತಂದೆಯನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.

              ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರದಲ್ಲಿ ಎಂಟು ಮಂದಿಯನ್ನು ಸಿಬಿಐ ಬಂಧಿಸಿದೆ. ಗುಜರಾತ್‌ನ ಲಾತೂರ್‌ ಮತ್ತು ಗೋಧ್ರಾದಲ್ಲಿ ತಲಾ ಒಬ್ಬರು ಮತ್ತು ಡೆಹ್ರಾಡೂನ್‌ನಲ್ಲಿ ಒಬ್ಬರನ್ನು ತನಿಖಾ ಸಂಸ್ಥೆ ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ಮೇ 5ರಂದು ನಡೆದಿದ್ದ ನೀಟ್‌-ಯುಜಿ ಪರೀಕ್ಷೆಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಸಿಬಿಐ ಎಫ್‌ಐಆರ್‌ ದಾಖಲಿಸಿದ್ದು, ವಿಶೇಷ ತಂಡಗಳನ್ನು ರಚಿಸಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries