* ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ: ಪ್ರಧಾನಿ ಮೋದಿ, ರಕ್ಷಣಾ, ಗೃಹ, ಹಣಕಾಸು, ವಿದೇಶಾಂಗ ವ್ಯವಹಾರಗಳ ಸಚಿವರು, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಮತ್ತು ಭಾರೀ ಕೈಗಾರಿಕೆಗಳು ಮತ್ತು ಉಕ್ಕು ಸಚಿವ ಎಚ್ ಡಿ ಕುಮಾರಸ್ವಾಮಿ ಇದ್ದಾರೆ. ವಾಣಿಜ್ಯ ಸಚಿವ ಪಿಯೂಷ್ ಗೋಯಲ್, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮತ್ತು ಪಂಚಾಯತ್ ರಾಜ್ ಮತ್ತು ಮೀನುಗಾರಿಕೆ ಸಚಿವ ರಾಜೀವ್ ರಂಜನ್ ಸಿಂಗ್ ಅಲಿಯಾಸ್ ಲಾಲನ್ ಸಿಂಗ್ ಕೂಡಾ ಸಮಿತಿಯಲ್ಲಿದ್ದಾರೆ.
ಸಂಸದೀಯ ವ್ಯವಹಾರಗಳ ಸಂಪುಟ ಸಮಿತಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿ ಅಮಿತ್ ಶಾ, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಪಂಚಾಯತ್ ರಾಜ್ ಸಚಿವ ರಾಜೀವ್ ರಂಜನ್ ಸಿಂಗ್, ಆರೋಗ್ಯ ಸಚಿವ ಜೆಪಿ ನಡ್ಡಾ, ಸಾಮಾಜಿಕ ನ್ಯಾಯ ಸಚಿವ ವೀರೇಂದ್ರ ಕುಮಾರ್, ನಾಗರಿಕ ವಿಮಾನಯಾನ ಸಚಿವ ಕಿಂಜರಾಪು ರಾಮ್ ಮೋಹನ್ ನಾಯ್ಡು, ಬುಡಕಟ್ಟು ವ್ಯವಹಾರಗಳ ಸಚಿವ ಜುಯಲ್ ಓರಾಮ್, ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ಜಲಶಕ್ತಿ ಸಚಿವ ಸಿ ಆರ್ ಪಾಟೀಲ್ ಅವರನ್ನು ಒಳಗೊಂಡಿದೆ. ಸಮಿತಿಯಲ್ಲಿ ವಿಶೇಷ ಆಹ್ವಾನಿತರಾಗಿ ಕೇಂದ್ರ ಕಾನೂನು ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಮತ್ತು ಕಾನೂನು ರಾಜ್ಯ ಸಚಿವ ಎಲ್ ಮುರುಗನ್ ಇದ್ದಾರೆ.
ರಾಜಕೀಯ ವ್ಯವಹಾರಗಳ ಸಮಿತಿ: ಪ್ರಧಾನಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ಆರೋಗ್ಯ ಸಚಿವ ಜೆ. ಪಿ. ನಡ್ಡಾ, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ವಾಣಿಜ್ಯ ಸಚಿವ ಪಿಯೂಷ್ ಗೋಯೆಲ್, ಜಿತಿನ್ ರಾಮ್ ಮಾಂಝಿ, ಸರ್ಬಾನಂದ ಸೊನಾವಾಲ್, ರಾಮ್ ಮೋಹನ್ ನಾಯ್ಡು, ಭುಪೇಂದರ್ ಯಾದವ್, ಕಿರಣ್ ರಿಜಿಜು, ಜಿ. ಕಿಶನ್ ರೆಡ್ಡಿ
* ಹೂಡಿಕೆ ಮತ್ತು ಪ್ರಗತಿ ಸಮಿತಿ: ಪ್ರಧಾನಿ, ರಕ್ಷಣಾ, ಗೃಹ, ರಸ್ತೆ ಮತ್ತು ಸಾರಿಗೆ, ಆರೋಗ್ಯ, ವಿತ್ತ, ವಾಣಿಜ್ಯ, ಆಹಾರ ಮತ್ತು ಪಡಿತರ ವಿತರಣೆ, ಟೆಕ್ಸ್ ಟೈಲ್, ರೈಲ್ವೆ, ಸಂವಹನ, ಪೆಟ್ರೋಲಿಯಂ ಮತ್ತು ಆಹಾರ ಸಂಸ್ಕರಣಾ ಸಚಿವರಿದ್ದಾರೆ.
* ಕೌಶಲ, ಉದ್ಯೋಗ ಹಾಗೂ ಜೀವನೋಪಾಯ ಸಂಪುಟ ಸಮಿತಿ: ಮುಖ್ಯಸ್ಥರು, ಸದಸ್ಯರು ಹಾಗೂ ವಿಶೇಷ ಆಹ್ವಾನಿತರನ್ನು ನರೇಂದ್ರ ಮೋದಿ ಅವರು ನೇಮಿಸಿದ್ದಾರೆ. ಪ್ರಧಾನಿ, ರಕ್ಷಣಾ, ಗೃಹ, ರಸ್ತೆ ಮತ್ತು ಸಾರಿಗೆ, ಆರೋಗ್ಯ, ವಿತ್ತ, ವಾಣಿಜ್ಯ, ಶಿಕ್ಷಣ, ರೈಲ್ವೆ, ಪರಿಸರ ಮತ್ತು ಅರಣ್ಯ, ಪ್ರವಾಸೋದ್ಯಮ, ಉದ್ಯೋಗ, ಕ್ರೀಡಾ ಸಚಿವರು ಸಮಿತಿಯಲ್ಲಿದ್ದಾರೆ.