HEALTH TIPS

ಮೋದಿಯ ಮಾಸ್ಕೊ ಭೇಟಿಯ ಬಗ್ಗೆ ಉಕ್ರೇನ್ ಅಧ್ಯಕ್ಷ ಕಟು ಟೀಕೆ: ಭಾರತ ಅಸಮಾಧಾನ

             ವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ರಷ್ಯಾ ರಾಜಧಾನಿ ಮಾಸ್ಕೊಕ್ಕೆ ಭೇಟಿ ನೀಡಿದ ಬಗ್ಗೆ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ಟೀಕಿಸಿರುವ ಬಗ್ಗೆ ಭಾರತ ಅಸಮಾಧಾನ ವ್ಯಕ್ತಪಡಿಸಿದೆ ಎಂದು ರಾಜತಾಂತ್ರಿಕ ಮೂಲಗಳು ತಿಳಿಸಿವೆ.

       ಝೆಲೆನ್‌ಸ್ಕಿ ಟೀಕೆಗಳ ಬಗ್ಗೆ ದೆಹಲಿಯಲ್ಲಿರುವ ಉಕ್ರೇನ್‌ನ ರಾಯಭಾರ ಕಚೇರಿಯಲ್ಲಿ ಭಾರತ ಅಸಮಾಧಾನ ವ್ಯಕ್ತಪಡಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


           ಉಕ್ರೇನ್‌ನಲ್ಲಿ ಯುದ್ಧ ನಡೆಯುತ್ತಿರುವ ಸಂದರ್ಭದಲ್ಲೇ ರಷ್ಯಾ ರಾಜಧಾನಿ ಮಾಸ್ಕೊಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದರು. ಈ ಕುರಿತು 'ಎಕ್ಸ್‌'ನಲ್ಲಿ ಪ್ರತಿಕ್ರಿಯಿಸಿದ್ದ ಝೆಲೆನ್‌ಸ್ಕಿ, ಮೋದಿಯವರ ಮಾಸ್ಕೊ ಭೇಟಿಯನ್ನು 'ದೊಡ್ಡ' ನಿರಾಸೆ ಮತ್ತು ಶಾಂತಿ ಪ್ರಯತ್ನಗಳಿಗೆ 'ವಿನಾಶಕಾರಿ ಹೊಡೆತ' ಬಿದ್ದಿದೆ ಎಂದು ಉಕ್ರೇನ್ ಮೇಲೆ ರಷ್ಯಾ ನಡೆಸುತ್ತಿರುವ ಕ್ಷಿಪಣಿ ದಾಳಿ ಬಗ್ಗೆ ಉಲ್ಲೇಖಿಸಿದ್ದರು.

'ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದ ನಾಯಕ ಮಾಸ್ಕೊದಲ್ಲಿ ವಿಶ್ವದ ಅತ್ಯಂತ ರಕ್ತಸಿಕ್ತ ಅಪರಾಧಿಯನ್ನು ತಬ್ಬಿಕೊಳ್ಳುವುದನ್ನು ನೋಡಲು ಬೇಸರವಾಗುತ್ತಿದೆ. ಶಾಂತಿಯ ಪ್ರಯತ್ನಗಳಿಗೆ ಭಾರಿ ನಿರಾಸೆ ಮೂಡಿಸುವುದರ ಜತೆಗೆ ವಿನಾಶಕಾರಿ ಹೊಡೆತ ಬಿದ್ದಂತಾಗಿದೆ'  ಎಂದು ತಿಳಿಸಿದ್ದಾರೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries