ಲೋಕಸಭೆ ಚುನಾವಣಾ ಫಲಿತಾಂಶ ಜೂನ್ 4ರಂದು ಪ್ರಕಟಗೊಂಡಿತ್ತು. ಬಿಜೆಪಿ ಆಡಳಿತವಿರುದ ರಾಜಸ್ಥಾನದಲ್ಲಿ ಕಾಂಗ್ರೆಸ್ ಉತ್ತಮ ಸಾಧನೆ ಮಾಡಿತ್ತು. 14 ಕ್ಷೇತ್ರಗಳಲ್ಲಿ ಬಿಜೆಪಿ ಜಯದ ನಗೆ ಬೀರಿದ್ದರೆ, ಕಾಂಗ್ರೆಸ್ 8 ಕ್ಷೇತ್ರಗಳಲ್ಲಿ ಗೆದ್ದಿತ್ತು.
ಜೈಪುರ: ರಾಜಸ್ಥಾನದ ಬಿಜೆಪಿಯ ನಾಯಕ ಕಿರೋಡಿ ಲಾಲ್ ಮೀನಾ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ.
ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ ತಮ್ಮ ಮುಂದಾಳತ್ವದ ಏಳು ಸ್ಥಾನಗಳ ಪೈಕಿ ಬಿಜೆಪಿ ಯಾವುದೇ ಸ್ಥಾನದಲ್ಲಿ ಸೋಲು ಕಂಡರೆ ಸಚಿವ ಸ್ಥಾನವನ್ನು ತೊರೆಯುವುದಾಗಿ 72 ವರ್ಷದ ಕಿರೋಡಿ ಲಾಲ್ ಮೀನಾ ಹೇಳಿದ್ದರು.
ತವರು ದೌಸಾ ಸೇರಿದಂತೆ ಬಿಜೆಪಿ ಪಕ್ಷವು ಕೆಲವು ಸ್ಥಾನಗಳನ್ನು ಕಳೆದುಕೊಂಡಿರುವ ಹಿನ್ನೆಲೆಯಲ್ಲಿ ಅವರು ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.
ಸಚಿವ ಸ್ಥಾನಕ್ಕೆ ಕಿರೋಡಿ ಮೀನಾ ರಾಜೀನಾಮೆ ಸಲ್ಲಿಸಿದ್ದಾರೆ. ಅವರು 10 ದಿನಗಳ ಹಿಂದೆಯೇ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಿದ್ದಾರೆ ಎಂದು ಆಪ್ತರು ತಿಳಿಸಿದ್ದಾರೆ.
ಲೋಕಸಭೆ ಚುನಾವಣಾ ಫಲಿತಾಂಶ ಜೂನ್ 4ರಂದು ಪ್ರಕಟಗೊಂಡಿತ್ತು. ಬಿಜೆಪಿ ಆಡಳಿತವಿರುದ ರಾಜಸ್ಥಾನದಲ್ಲಿ ಕಾಂಗ್ರೆಸ್ ಉತ್ತಮ ಸಾಧನೆ ಮಾಡಿತ್ತು. 14 ಕ್ಷೇತ್ರಗಳಲ್ಲಿ ಬಿಜೆಪಿ ಜಯದ ನಗೆ ಬೀರಿದ್ದರೆ, ಕಾಂಗ್ರೆಸ್ 8 ಕ್ಷೇತ್ರಗಳಲ್ಲಿ ಗೆದ್ದಿತ್ತು.