ಇಂದೋರ್: 'ಪ್ರಧಾನಿ ನರೇಂದ್ರ ಮೋದಿ ಅವರು ದೂರದೃಷ್ಟಿಯಿಂದ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಜಾರಿಗೆ ತಂದಿದ್ದು, ಇದರಿಂದ 2047ರ ವೇಳೆಗೆ ದೇಶವು ಅಭಿವೃದ್ಧಿ ಹೊಂದಿದ ದೇಶವಾಗಲಿದೆ' ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅಭಿಪ್ರಾಯಪಟ್ಟರು.
ಇಂದೋರ್: 'ಪ್ರಧಾನಿ ನರೇಂದ್ರ ಮೋದಿ ಅವರು ದೂರದೃಷ್ಟಿಯಿಂದ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಜಾರಿಗೆ ತಂದಿದ್ದು, ಇದರಿಂದ 2047ರ ವೇಳೆಗೆ ದೇಶವು ಅಭಿವೃದ್ಧಿ ಹೊಂದಿದ ದೇಶವಾಗಲಿದೆ' ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅಭಿಪ್ರಾಯಪಟ್ಟರು.
ಇಂದೋರ್‌ನ ಅಟಲ್ ಬಿಹಾರಿ ವಾಜಪೇಯಿ ಸರ್ಕಾರಿ ಕಾಲೇಜಿನಲ್ಲಿ ಭಾನುವಾರ ನಡೆದ ಮಧ್ಯಪ್ರದೇಶದ 55 ಜಿಲ್ಲೆಗಳಲ್ಲಿ ಆರಂಭಗೊಂಡ 'ಪ್ರಧಾನಮಂತ್ರಿ ಕಾಲೇಜ್ ಆಫ್ ಎಕ್ಸಲೆನ್ಸ್'ಗೆ ಚಾಲನೆ ನೀಡಿ ಮಾತನಾಡಿದರು.
'ಮಧ್ಯಪ್ರದೇಶ ಸೇರಿದಂತೆ ಇತರೆ ರಾಜ್ಯಗಳಲ್ಲಿ ಎನ್‌ಇಪಿ ಜಾರಿಗೊಳಿಸಿದ್ದನ್ನು ಶ್ಲಾಘಿಸಿದ ಶಾ, 2047ರ ವೇಳೆಗೆ ದೇಶವು ಅಭಿವೃದ್ಧಿ ಹೊಂದಿದ ದೇಶವಾಗಿರಬೇಕು ಎಂದು ಪ್ರಧಾನಿ ಮೋದಿ ಗುರಿ ನಿಗದಿಪಡಿಸಿದ್ದಾರೆ. ಇದು ಸಾಧ್ಯವಾಗಲು ಎನ್‌ಇಪಿಯು ಪ್ರಮುಖ ಪಾತ್ರ ವಹಿಸುತ್ತದೆ. ದೇಶ ಅಭಿವೃದ್ಧಿಯಾಗಬೇಕಾದರೆ, ಶಿಕ್ಷಣವೇ ಮುಖ್ಯ ಅಡಿಪಾಯ. ಮುಂದಿನ 25 ವರ್ಷದ ದೂರದೃಷ್ಟಿ ಇಟ್ಟುಕೊಂಡು ಎನ್‌ಇಪಿ ಜಾರಿಗೆ ತರಲಾಗಿದೆ' ಎಂದರು.